ETV Bharat / state

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ ವೇಳೆ ಕೈ-ಕಮಲ ಕಾರ್ಯಕರ್ತರ ನಡುವೆ ವಾಗ್ವಾದ - Chikkamagaluru latest news

ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು-ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

Fight between BJP and congress activists
ಕೈ-ಕಮಲ ಕಾರ್ಯಕರ್ತರ ಕಚ್ಚಾಟ
author img

By

Published : Dec 15, 2020, 3:36 PM IST

ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಖಂಡಿಸಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು-ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಪ್ರತಿಭಟನೆ ವೇಳೆ ಕೈ-ಕಮಲ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಗದ್ದಲ ಉಂಟಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವೇದಿಕೆ ಮುಂಭಾಗ ಗಲಾಟೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಮಾಜಿ ಸಚಿವ ಡಿ.ಎನ್.ಜೀವರಾಜ್ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಲು ಮುಂದಾದಾಗ ಈ ಘಟನೆ ನಡೆದಿದೆ.

ಓದಿ...ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್​ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ಸಭೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ. ಸಾವಿರಾರು ಜನರೆದುರು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕಚ್ಚಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.