ETV Bharat / state

ತಿಂಗಳಿಗೊಂದು ಬಲಿ ಪಡೆಯುತ್ತಿದ್ದ ಕಾಡಾನೆ ಭೈರ ಕೊನೆಗೂ ಸೆರೆ.. ಮೂಡಿಗೆರೆ ಜನ ನಿರಾಳ - ಕಾಡಾನೆ ಭೈರ ಕೊನೆಗೂ ಸೆರೆ

ತಿಂಗಳಿಗೊಂದು ಜೀವ ಬಲಿ ಪಡೆಯುತ್ತಿದ್ದ ಕಾಡಾನೆ ಭೈರನನ್ನು ಎಂಟು ದಿನಗಳ ಕಾಲ ದೀರ್ಘ ಕಾರ್ಯಾಚರಣೆ ನಡೆಸಿ, ಇದೀಗ ಅರಣ್ಯಾಧಿಕಾರಿಗಳು ಖೆಡ್ಡಾಕ್ಕೆ ಬೀಳಿಸಿದ್ದಾರೆ.

Finally forest officers captured elephant Bhaira
ಬೈರನ ಸೆರೆ ಹಿಡಿದ ಅಧಿಕಾರಿಗಳು
author img

By

Published : Dec 12, 2022, 7:00 AM IST

Updated : Dec 12, 2022, 1:15 PM IST

ಬೈರನ ಸೆರೆ ಹಿಡಿದ ಅಧಿಕಾರಿಗಳು

ಚಿಕ್ಕಮಗಳೂರು: ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿದ್ದ ಕಾಡಾನೆ ಮೂಡಿಗೆರೆ ಭೈರನನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊಂಡು ಇಬ್ಬರ ಜೀವ ತೆಗೆದಿದ್ದ ಭೈರನಿಂದ ಜನ ರೋಸಿ ಹೋಗಿದ್ದರು. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದರು. ಆನೆ ಹಾವಳಿಯಿಂದ ತಿಂಗಳಿಗೊಂದು ಹೆಣ ಬಿದ್ದ ಪರಿಣಾಮ ಕಂಗೆಟ್ಟಿದ್ದ ಜನ ಶಾಸಕ ಎಂ ಪಿ ಕುಮಾರಸ್ವಾಮಿ ಮೇಲೂ ಹಲ್ಲೆಗೆ ಮುಂದಾಗಿದ್ದರು. ಜನ ಯಾವಾಗ ಶಾಸಕರ ಮೇಲೆ ಹಲ್ಲೆಗೆ ಮುಂದಾದರೋ ಕೂಡಲೇ ಸರ್ಕಾರ ಮೂರು ಕಾಡಾನೆಗಳನ್ನು ಹಿಡಿಯಲು ಹಸಿರು ನಿಶಾನೆ ತೋರಿತ್ತು.

ಸಾಕಾನೆಗಳೊಂದಿಗೆ ಕಾರ್ಯಾಚರಣೆ.. ಸರ್ಕಾರ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಕಳೆದ ಎಂಟತ್ತು ದಿನಗಳಿಂದ ಆರು ಸಾಕಾನೆಗಳೊಂದಿಗೆ ಮೂರು ಕಾಡಾನೆಗಳನ್ನು ಹಿಡಿಯಲು ಅಧಿಕಾರಿಗಳು, ಸ್ಥಳೀಯರು ಹಗಲಿರುಳು ಕಷ್ಟ ಪಟ್ಟಿದ್ದರು. ಎರಡು ಕಾಡಾನೆಗಳನ್ನು ಸೆರೆ ಹಿಡಿದು ಮಡಿಕೇರಿಯ ಆನೆ ದುಬಾರೆ ಹಾಗೂ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರಕ್ಕೆ ಬಿಟ್ಟಿದ್ದರು. ಆದರೆ ಪುಂಡ ಒಂಟಿ ಸಲಗ ಮೂಡಿಗೆರೆ ಭೈರ ಮಾತ್ರ ಎಲ್ಲರ ಕಣ್ತಪ್ಪಿಸಿ ನಾಪತ್ತೆಯಾಗುತ್ತಿತ್ತು.

ಜನರು ಮತ್ತು ಅಧಿಕಾರಿಗಳು ನಿರಾಳ.. ಅರಣ್ಯ ಅಧಿಕಾರಿಗಳ ಡ್ರೋನ್ ಕ್ಯಾಮರಾ ಕಣ್ತಪ್ಪಿಸಿ ದಟ್ಟ ಕಾನನದಲ್ಲಿ ಪರಾರಿಯಾಗಿ ಓಡಾಡ್ತಿದ್ದ. ಆದರೆ ಭಾನುವಾರ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಭೈರ ಇರುವ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ ಭೈರನನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ. ಈ ಮೂಡಿಗೆರೆ ಭೈರನನ್ನು ಸೆರೆ ಹಿಡಿಯುವಷ್ಟರಲ್ಲಿ ಅರಣ್ಯ ಅಧಿಕಾರಿಗಳು ಕೂಡ ಹೈರಾಣಾಗಿದ್ದಾರೆ. ಜನರ ನಿದ್ದೆಗೆಡಿಸಿದ್ದ ಭೈರ ಸೆರೆಯಾದ ಕಾರಣ ಜನರ ಜೊತೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ.

ರೊಚ್ಚಿಗೆದ್ದಿದ್ದ ಜನ.. ಈ ಮೂಡಿಗೆರೆ ಭೈರನ ಹೆಜ್ಜೆ ಗುರುತುಗಳು ಮಲೆನಾಡ ಮಣ್ಣಲ್ಲಿ ಅಚ್ಚಳಿಯದೆ ಉಳಿದಿವೆ. ಯಾಕೆಂದರೆ ಮಲೆನಾಡಲ್ಲಿ ದಶಕಗಳಿಂದ ಆನೆ ಹಾವಳಿ ಇದೆ. ಆದರೆ ಜನರಿಗೆ ಹಾಗೂ ಅಧಿಕಾರಿಗಳಿಗೆ ಇವನಷ್ಟು ಯಾರೂ ಕಾಟ ಕೊಟ್ಟಿರಲಿಲ್ಲ. ಜೀವ ತೆಗೆದಿರಲಿಲ್ಲ. ಭೈರನ ಆರ್ಭಟಕ್ಕೆ ಎರಡು ತಿಂಗಳಲ್ಲಿ ಇಬ್ಬರು ಬಲಿಯಾಗಿದ್ದರು. ತಿಂಗಳ ಹಿಂದೆ ಮಹಿಳೆಯೊಬ್ಬಳು ಸಾವನ್ನಪ್ಪಿದ್ದರಿಂದ ಜನ ರೊಚ್ಚಿಗೆದ್ದು ಅರಣ್ಯ ಇಲಾಖೆಯ ಕಳ್ಳ ಬೇಟೆ ನಿಗ್ರಹ ಕಚೇರಿಯನ್ನು ಧ್ವಂಸ ಮಾಡಿದ್ದರು. ಆನೆ ದಾಳಿಗೆ ಕಂಗೆಟ್ಟು ಶಾಸಕರ ಮೇಲೂ ಹಲ್ಲೆ ಮಾಡಿದ್ದರು.

ಕಾಡಿನಲ್ಲಿ ಕಣ್ಮರೆಯಾಗುತ್ತಿದ್ದ ಚಾಲಾಕಿ ಭೈರ.. ಇವನ ಕಾಟಕ್ಕೆ ಬೇಸತ್ತು ಅಧಿಕಾರಿಗಳು ಬೀದಿ - ಬೀದಿಯಲ್ಲಿ ಮೈಕ್ ಹಿಡಿದು ಅನೌನ್ಸ್ ಮಾಡಿದ್ದರು. ಒಂದು ಪುಂಡ ಕಾಡಾನೆ ಮಲೆನಾಡಿಗರಿಗೆ ಈ ಮಟ್ಟಕ್ಕೆ ರೋದನೆ ಕೊಟ್ಟಿದ್ದು ಇದೇ ಮೊದಲು. ಭೈರನ ಸೆರೆಗೆ ಅರಣ್ಯ ಇಲಾಖೆ ಪ್ರಯತ್ನಿಸಿದ್ದು ಇದೇ ಮೊದಲಲ್ಲ. ಕಳೆದ ಎರಡು ತಿಂಗಳ ಹಿಂದೆಯೂ ಇವನನ್ನು ಹಿಡಿಯೋಕೆ ದಸರಾ ಆನೆಗಳ ಜೊತೆ ಮಡಿಕೇರಿಯಿಂದ ಒಟ್ಟು ಆರು ಕಾಡಾನೆಗಳು ಬಂದಿದ್ದವು. ಎರಡು ಮೂರು ದಿನ ಕಾರ್ಯಾಚರಣೆಯನ್ನು ಕೂಡ ನಡೆಸಿದ್ದವು.

ಆದರೆ ಆ ಹೊತ್ತಿಗಾಗಲೇ ಈ ಭೈರ ಕಾಡಿನಲ್ಲಿ ಕಣ್ಮರೆಯಾಗಿದ್ದ. ಈ ವೇಳೆ ಆನೆಗಳಿಗೆ ಜ್ವರ ಹಾಗೂ ಹೊಟ್ಟೆ ಕೆಟ್ಟಿತ್ತು ಎಂದು ಕಾರ್ಯಾಚರಣೆ ಸ್ಥಗಿತಗೊಳಿಸಿ ವಾಪಸ್ ಕಳಿಸಿದ್ದರು. ಸಾಕಾನೆಗಳು ಹೋಗುತ್ತಿದ್ದಂತೆ ಮತ್ತೆ ಬಂದ ಈ ಪುಂಡ ಸಿಕ್ಕಾಪಟ್ಟೆ ಕಾಟ ನೀಡಲು ಶುರು ಮಾಡಿದ್ದ. ಎರಡನೇ ಬಾರಿ ಮತ್ತೆ ಬಂದ ಆರು ಸಾಕಾನೆಗಳು ಎಂಟು ದಿನಗಳ ಕಾಲ ನಿರಂತರ ಕಾರ್ಯಾಚರಣೆಯ ಬಳಿಕ ಈ ಭೈರನನ್ನು ಸೆರೆ ಹಿಡಿದಿವೆ.

ಇದನ್ನೂ ಓದಿ: ಅರಿವಳಿಕೆ ಚುಚ್ಚು ಮದ್ದು ಪಡೆದು ಅರೆ ಮಂಪರಿನಲ್ಲಿದ್ದ ಕಾಡಿನತ್ತ ಓಡಿಹೋದ ಆನೆ

Last Updated : Dec 12, 2022, 1:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.