ಚಿಕ್ಕಮಗಳೂರು: ನೆರೆ ಹಾವಳಿ ಪ್ರದೇಶದಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೇ ಎಂದು ಆರೋಪಿಸಿ, ಜಿಲ್ಲೆಯ ನೆರೆ ಸಂತ್ರಸ್ತರು ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶಾಮಿಯಾನ ಪೆಂಡಲ್ ಹಾಕಿ ನೆರೆ ಸಂತ್ರಸ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ನಿರಾಶ್ರಿತರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಭಾಗಿಯಾಗಿದ್ದು, ಮಲೆನಾಡು ಭಾಗದಲ್ಲಿ ಸುರಿದ ಮಹಾ ಮಳೆಯಿಂದಾ ಆಗಿರುವ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.
ಇನ್ನು ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಬೇರೆಡೆ ಜಮೀನು, ಮನೆ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸುತ್ತಿದ್ದು, ಮೂಡಿಗೆರೆ ತಾಲೂಕಿನ ಮಧುಗುಂಡಿ, ಆಲೇಖಾನ ಹೊರಟ್ಟಿ, ದುರ್ಗದ ಹಳ್ಳಿ, ಚನ್ನಹಡ್ಲು. ಕಳಸ ಭಾಗದ ನೂರಾರು ನಿರಾಶ್ರಿತರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಅಪಾರ ಜಿಲ್ಲಾಧಿಕಾರಿ ಕುಮಾರ್ ಭೇಟಿ ನೀಡಿ ಕೂಡಲೇ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.