ETV Bharat / state

ಔಷಧಿಯೇ ಆಹಾರವಲ್ಲ, ಆಹಾರದಲ್ಲಿ ಔಷಧಿ ಇದೆ: ಸಚಿವ ಸಿ.ಟಿ.ರವಿ

author img

By

Published : Jun 17, 2020, 11:54 AM IST

ಬೆಂಗಳೂರು ಆಯುಷ್ ನಿರ್ದೇಶನಾಲಯ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗು ಚಿಕ್ಕಮಗಳೂರು ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯೋಜಿಸಿದ್ದ ಆಯುಷ್ ಔಷಧ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಉದ್ಘಾಟಿಸಿ ಮಾತನಾಡಿದರು.

ಆಯುಷ್ ಔಷಧ ವಿತರಣಾ ಕಾರ್ಯಕ್ರಮ
ಆಯುಷ್ ಔಷಧ ವಿತರಣಾ ಕಾರ್ಯಕ್ರಮ

ಚಿಕ್ಕಮಗಳೂರು: ಆಯುರ್ವೇದ ಔಷಧಿಯಿಂದ ಮಾನವನ ದೇಹಕ್ಕೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಬದಲಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಕೆಲ ರೋಗಗಳಿಂದ ಮುಕ್ತರಾಗಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಆಯುಷ್ ಔಷಧ ವಿತರಣಾ ಕಾರ್ಯಕ್ರಮ
ಆಯುಷ್ ಔಷಧ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ. ರವಿ ಆಯುರ್ವೇದ ಔಷಧಗಳ ಮಹತ್ವ ವಿವರಿಸಿದರು.

ಹೋಮಿಯೋಪತಿ ಔಷಧಗಳನ್ನು ಬಳಸುವುದರಿಂದ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಬದಲಿಗೆ ನಿಧಾನವಾಗಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಹಲವಾರು ರೋಗಗಳಿಂದ ನಮ್ಮನ್ನು ರಕ್ಷಿಸಲು ಸಹಕಾರಿಯಾಗಲಿದೆ. ಔಷಧಿಯೇ ಆಹಾರವಲ್ಲ, ಆದರೆ ಆಹಾರದಲ್ಲಿ ಔಷಧಿ ಇರಲಿದೆ. ನಾವೂ ದಿನನಿತ್ಯ ಬಳಸುವ ಆಹಾರ ಬದಲಿಸಿ ವ್ಯವಸ್ಥಿತವಾಗಿರುವುದರ ಜೊತೆಗೆ ಆಯುರ್ವೇದ ಔಷಧಿಗಳನ್ನು ಬಳಸುವುದರಿಂದ ಆಂತರಿಕ ಬಲ ಹೆಚ್ಚಲಿದೆ ಎಂದು ಸಚಿವ ಸಿ.ಟಿ. ರವಿ ಅಭಿಪ್ರಾಯಪಟ್ಟರು.

ಆಯುಷ್ ಔಷಧ ವಿತರಣಾ ಕಾರ್ಯಕ್ರಮ
ಆಯುಷ್ ಔಷಧ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ.ರವಿ ಮತ್ತು ಸಂಸದೆ ಶೋಭಾ ಕರಂದ್ಲಾಜೆ

ಕೋವಿಡ್-19 ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಗಲಿರುಳು ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್‌ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಆಯುಷ್ ಔಷಧಿಗಳನ್ನು ವಿತರಿಸಲಾಗುತ್ತಿದೆ. ಸಾಧ್ಯವಾದರೆ, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಜನರಿಗೂ ಆಯುಷ್ ಔಷಧಿ ವಿತರಿಸಲಾಗುವುದು ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ದೇಶದಲ್ಲಿ ಪ್ರಾರಂಭದ ಹಂತದಲ್ಲಿಯೇ ಲಾಕ್‌ಡೌನ್ ಜಾರಿ ಮಾಡಿದ್ದರಿಂದ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಬೇರೆ ದೇಶಗಳಿಗೆ ಹೋಲಿಸಿದ್ರೆ ನಮ್ಮ ದೇಶದಲ್ಲಿ ಸಾವಿನ ಸಂಖ್ಯೆ ಸಾಕಷ್ಟು ಕಡಿಮೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.