ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂಬರ್ 20ರ ಸೆಕ್ಷನ್ 4 ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಶೆಡ್ಗಳನ್ನ ಹರಿಹರಪುರ ಉಪ ಅರಣ್ಯಾಧಿಕಾರಿ ನೇತೃತ್ವದ ತಂಡ ತೆರವು ಮಾಡಿದೆ.
ಕಳೆದ ಕೆಲ ತಿಂಗಳ ಹಿಂದೆ ಈ ಸ್ಥಳದಲ್ಲಿ ಕವಿರಾಜ್ ಎಂಬುವವರು ಶೆಡ್ ನಿರ್ಮಾಣ ಮಾಡಿದ್ದರು. ಆಗ ಹರಿಹರಪುರ ಉಪ ಅರಣ್ಯಾಧಿಕಾರಿ ನೇತೃತ್ವದಲ್ಲಿ ತೆರವು ಮಾಡಲಾಗಿತ್ತು. ಮತ್ತೆ ಅದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಲಾಗಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮತ್ತೆ ತೆರವು ಮಾಡಿದ್ದಾರೆ.
ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಗ್ರಾಮಸ್ಥರ ಮಾತಿಗೆ ಜಗ್ಗದ ಅರಣ್ಯ ಇಲಾಖೆ ಅಧಿಕಾರಿಗಳು, ಶೆಡ್ ತೆರವು ಮಾಡಿದ್ದಾರೆ.