ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತವಾಗಿರುವ ಘಟನೆ ಚಿಕ್ಕಮಗಳೂರು ಸಮೀಪದ ಮಲ್ಲೇನಹಳ್ಳಿ ಬಳಿ ನಡೆದಿದೆ. ಕಾಫಿ ತೋಟದ ಒಳಗೆ ಪೊಲೀಸ್ ಬೊಲೆರೋ ವಾಹನ ನುಗ್ಗಿದ್ದು, ಅದರಲ್ಲಿದ್ದ ಇಬ್ಬರು ಎಸ್ಕಾರ್ಟ್ ಸಿಬ್ಬಂದಿಗೆ ಗಾಯಗಳಾಗಿವೆ.
ಚಿಕ್ಕಮಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿ ಶಿವಮೊಗ್ಗದತ್ತ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನೆರವಾಗಿದ್ದಾರೆ.