ETV Bharat / state

ಚಿಕ್ಕಮಗಳೂರಿನ ರೆಸಾರ್ಟ್​ನಲ್ಲಿ ರಿಲ್ಯಾಕ್ಸ್ ಮೂಡ್​ನಲ್ಲಿರುವ ಮಾಜಿ ಸಿಎಂ ಎಚ್​ಡಿಕೆ - ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ

HDK Meeting with Party MLAs: ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಗಳ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಚಿಕ್ಕಮಗಳೂರಿಗೆ ಆಗಮಿಸಲಿರುವ ಪಕ್ಷದ ಶಾಸಕರ ಜೊತೆಗೆ ಇಂದು ಎಚ್​ ಡಿ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.

Former CM HDK in relaxing mood at Chikmagalur resort
ಚಿಕ್ಕಮಗಳೂರಿನ ರೆಸಾರ್ಟ್​ನಲ್ಲಿ ರಿಲ್ಯಾಕ್ಸ್ ಮೂಡ್​ನಲ್ಲಿರುವ ಮಾಜಿ ಸಿಎಂ ಎಚ್​ಡಿಕೆ
author img

By ETV Bharat Karnataka Team

Published : Nov 18, 2023, 5:29 PM IST

ಚಿಕ್ಕಮಗಳೂರಿನ ರೆಸಾರ್ಟ್​ನಲ್ಲಿ ರಿಲ್ಯಾಕ್ಸ್ ಮೂಡ್​ನಲ್ಲಿರುವ ಮಾಜಿ ಸಿಎಂ ಎಚ್​ಡಿಕೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆಯ ಹನಿ ಡ್ಯೂ ರೆಸಾರ್ಟ್​ನಲ್ಲಿ ಎಚ್ ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದು, ರೂಮ್ ಪಕ್ಕದಲ್ಲಿ ಎಚ್​ಡಿಕೆ ವಾಕಿಂಗ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಎಚ್ ಡಿ ಕುಮಾರಸ್ವಾಮಿ ಕೂಲ್ ಆಗಿದ್ದು, ಜೆಡಿಎಸ್ ಪಕ್ಷದ ಶಾಸಕರ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಜೆಡಿಎಸ್​ನ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರಿಗೆ ಎಲ್ಲರೂ ಆಗಮಿಸುತ್ತಿದ್ದು, ಈ ವೇಳೆ ಅನೇಕ ರಾಜಕೀಯ ಚರ್ಚೆಗಳು ಹಾಗೂ ಬೆಳವಣಿಗೆಗಳು ಆಗುವ ಸಾಧ್ಯತೆ ಇದೆ. ಸಂಜೆ ವೇಳೆಗೆ ರೆಸಾರ್ಟ್​ಗೆ ಎಲ್ಲಾ ಜೆಡಿಎಸ್ ಶಾಸಕರು ಆಗಮಿಸಲಿದ್ದು, ಇಂದು ತಮ್ಮ ಪಕ್ಷದ ಶಾಸಕರ ಜೊತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಲಿದ್ದಾರೆ. ಇದಕ್ಕೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಸಾಕ್ಷಿ ಆಗಲಿದೆ.

ಸಂಜೆ ಶಾಸಕರ ಜೊತೆ ರೆಸಾರ್ಟ್​ನಲ್ಲಿ ಸಭೆ ನಡೆಸಲಿದ್ದು, ಎರಡು ದಿನಗಳ ಕಾಲ ರೆಸಾರ್ಟ್​ನಲ್ಲಿ ಎಚ್​ಡಿಕೆ ವಾಸ್ತವ್ಯ ಹೂಡಲಿದ್ದಾರೆ. ನಾಳೆ ವಿಧಾನ ಪರಿಷತ್ ಸದಸ್ಯ ಎಸ್​ ಎಲ್ ಭೋಜೇಗೌಡ ಮಗಳ ನಿಶ್ಚಿತಾರ್ಥದಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಶಾಸಕರು ಭಾಗವಹಿಸಲಿದ್ದು, ನಿಶ್ಚಿತಾರ್ಥ ಕಾರ್ಯ ಮುಗಿಸಿ ಬೆಂಗಳೂರಿನ ಕಡೆ ಪ್ರಯಾಣ ಮಾಡಲಿದ್ದಾರೆ.

ರೆಸಾರ್ಟ್​ನಲ್ಲಿ ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾರಣ ರೆಸಾರ್ಟ್​ನ ರೂಂನತ್ತ ಉಳಿದವರಿಗೆ ಪ್ರವೇಶ ನಿರಾಕರಿಸಲಾಗಿದೆ. ರೆಸಾರ್ಟ್ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದು, ಮಾಧ್ಯಮಗಳಿಗೆ ಕುಮಾರಸ್ವಾಮಿ ಸಿಗೋದು ಡೌಟ್ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಜೆಸಿಎಸ್​ ಸಿದ್ಧತೆ: ಬಿಜೆಪಿ ಹಾಗೂ ಕಾಂಗ್ರೆಸ್​ ಎರಡೂ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಜಾತ್ಯತೀತ ಜನತಾ ದಳ ಇತ್ತೀಚೆಗೆ ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆ ನಂತರದಲ್ಲಿ ಜೆಡಿಎಸ್​ ಬಿಜೆಪಿ ಪರ ಬ್ಯಾಟಿಂಗ್​ ಶುರು ಮಾಡಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಉಳಿಸಿಕೊಳ್ಳುವ ದೂರದೃಷ್ಟಿಯಿಂದ ಜೆಡಿಎಸ್​ ಪಕ್ಷ ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್​ ಒಗ್ಗೂಡಿದ್ದು, 24 ಹಾಗೂ 4 ಸ್ಥಾನಗಳ ಹಂಚಿಕೆ ಈಗಾಗಲೇ ನಡೆದಿದೆ ಎಂದು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಮೈತ್ರಿ ಮಾತುಕತೆ ನಡೆಸಿದ್ದ ಸಂದರ್ಭದಲ್ಲಿ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್​ ಕೇಳಿತ್ತು. ಹಾಗಾಗಿ ಈ ಸ್ಥಾನಗಳನ್ನು ಬಿಟ್ಟು ಉಳಿದ 24 ಕ್ಷೇತ್ರಗಳಲ್ಲಿ ಬಿಜೆಪಿ ಸ್ಫರ್ಧೆ ಮಾಡಲು ನಿರ್ಧರಿಸಿತ್ತು.

ಆದರೆ, ಮಂಡ್ಯ ಕ್ಷೇತ್ರದ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿರುವ ಸುಮಲತಾ ಅವರು ಮಂಡ್ಯದಲ್ಲಿ ಸಂಸದೆಯಾಗಿರುವ ಕಾರಣ, ಮಂಡ್ಯದ ಬದಲಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್​​ಗೆ ನೀಡುವ ಕುರಿತು ಬಿಜೆಪಿ ಚರ್ಚೆ ನಡೆಸಿತ್ತು. ಇದೀಗ ಜೆಡಿಎಸ್​ನ ಎಲ್ಲಾ ಶಾಸಕರು ಒಂದೆಡೆ ಸೇರಿದ್ದು, ಲೋಕಸಭಾ ಚುನಾವಣೆಯ ಬಗ್ಗೆ ಮತ್ತೆ ಯಾವ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ದ್ವಂದ್ವ ನಿಲುವಿನಿಂದ ಹೆಚ್​ಡಿಕೆ ನಾಯಕತ್ವದ ಮೌಲ್ಯ ಕಳೆದುಕೊಳ್ಳುತ್ತಿದ್ದಾರೆ: ಸಚಿವ ಮಹದೇವಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.