ETV Bharat / state

ಟಿಕೆಟ್ ಸಿಕ್ಕವರಿಗೆ ಒಳ್ಳೆಯದಾಗಲಿ.. ನನ್ನ ಮುಂದಿನ ನಡೆ ಭಾನುವಾರ ನಿರ್ಧಾರ: ಮಾಜಿ ಶಾಸಕ ದತ್ತಾ - ಕಡೂರು ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವೈ ಎಸ್​ ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ ದತ್ತಾ ಸುದ್ದಿಗೋಷ್ಠಿ ನಡೆಸಿದರು.

ಮಾಜಿ ಶಾಸಕ ದತ್ತಾ
ಮಾಜಿ ಶಾಸಕ ದತ್ತಾ
author img

By

Published : Apr 8, 2023, 8:01 AM IST

ಮಾಜಿ ಶಾಸಕ ದತ್ತಾ

ಚಿಕ್ಕಮಗಳೂರು: ಅಭಿಮಾನಿಗಳೇ ನನ್ನ ದೇವರುಗಳು, ಬೇರೆಯವರಿಗೆ ಟಿಕೆಟ್ ನೀಡಿರುವುದಕ್ಕೆ ನನ್ನ ಆಕ್ಷೇಪಣೆ ಇಲ್ಲ. ನನಗೆ ಅಸೂಯೆಯೂ ಇಲ್ಲ, ಟಿಕೆಟ್ ಪಡೆದವರಿಗೆ ಒಳ್ಳೆದಾಗಲಿ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಯಗಟಿಯಲ್ಲಿ ಮಾಜಿ ಶಾಸಕ ವೈಎಸ್ ವಿ ದತ್ತಾ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ತಪ್ಪಿದ ಬೆನ್ನಲ್ಲೇ ದತ್ತಾ ಅವರು ಸುದ್ದಿಗೋಷ್ಠಿ ನಡೆಸಿದರು.

ಟಿಕೆಟ್ ನೀಡುವುದಕ್ಕೂ ಮುಂಚೆ ಬೇರೆ ಕ್ಷೇತ್ರಗಳಲ್ಲಿ ನಡೆಸಿದ ಪ್ರಕ್ರಿಯೆ ನಮ್ಮಲ್ಲೂ ನಡೆಸಬಹುದಿತ್ತು. ಟಿಕೆಟ್ ಘೋಷಣೆಯಾದ ಬಳಿಕವೂ ನನ್ನನ್ನು ಯಾರು ಸಂಪರ್ಕ ಮಾಡಿಲ್ಲ. ನಾನು ಬಾಡಿಗೆ ಕಾರಿನಲ್ಲಿ ತಿರುಗುತ್ತೇನೆ, ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರವಾಸ ಮಾಡುತ್ತೇನೆ. ನನ್ನನ್ನು ವರಿಷ್ಠರು ಸಂಪರ್ಕ ಮಾಡಬಹುದಿತ್ತು, ಆದರೆ ಮಾಡಲಿಲ್ಲ. ದತ್ತಾನನ ಶಕ್ತಿ ಭಾರಿ ಗೌಣ, ಏನು ತೊಂದರೆ ಆಗುವುದಿಲ್ಲ ಎಂದು ಭಾವಿಸಿರಬಹುದು. ನನ್ನ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. ನಿಮ್ಮನ್ನು ಕರೆಸಿ ಮಾತನಾಡದ ಕಾರಣ ಇದು ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಹಾಗಾಗಿ ಸ್ವಾಭಿಮಾನದ ಪದ ಬಳಕೆ ಮಾಡಿದ್ದೇನೆ. ನಾನು ಯಾವುದೇ ಷರತ್ತು ಹಾಕಿ ಪಕ್ಷಕ್ಕೆ ಸೇರಿದವನಲ್ಲ. ಸಮೀಕ್ಷೆಯಲ್ಲಿ ಹಾಗೂ ಜನ ಅಭಿಪ್ರಾಯದಲ್ಲಿ ನನ್ನ ಹೆಸರು ಬರಬಹುದು ಎಂದು ಭಾವಿಸಿದ್ದೆ. ಸಮೀಕ್ಷೆ ಆಧಾರದ ಮೇಲೆ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾರೆ ಎಂದು ತಿಳಿದಿದ್ದೆ. ಸಮೀಕ್ಷೆ ಬಗ್ಗೆ ಪೂರ್ಣವಾಗಿ ನಂಬಿಕೆ ಇಟ್ಟಿದ್ದೆ ಎಂದರು.

ನಾನು ಸಾಮಾನ್ಯರಲ್ಲಿ ಸಾಮಾನ್ಯ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ, ಹಣ ಬಲವಿಲ್ಲ. ನಾನು ನನ್ನ ಜನರನ್ನ ನಂಬಿ ಕೊಂಡಿದ್ದೇನೆ. ನನ್ನ ಅಭಿಮಾನಿಗಳು ಹಾಗೂ ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ನನ್ನ ಕುಟುಂಬದಲ್ಲಿ ಸೂತಕ ಆವರಿಸಿದ ರೀತಿ ವಾತಾವರಣ ನಿರ್ಮಾಣವಾಗಿದೆ. ಅವರ ಪ್ರೀತಿ ನನ್ನನ್ನು ಮಡುಗಟ್ಟುವಂತೆ ಮಾಡಿದೆ. ನನ್ನನ್ನು ನಂಬಿದವರಿಗೆ ಅನ್ಯಾಯ ಮಾಡಲು ನಾನು ತಯಾರಿಲ್ಲ. ನನ್ನ ನಿರ್ಧಾರ ಭಾನುವಾರ ಕಾರ್ಯಕರ್ತರ ಸಮ್ಮುಖದಲ್ಲಿ ಮಾಡುತ್ತೇನೆ ಎಂದು ಕಡೂರು ತಾಲೂಕಿನ ಯಗಟಿಯ ಅವರ ಮನೆಯಲ್ಲಿ ಎಸ್ ವಿ ದತ್ತಾ ತಮ್ಮ ಮುಂದಿನ ನಡೆಯನ್ನು ಕಾಯ್ದಿರಿಸಿದರು.

ಭಾವುಕರಾದ ದತ್ತಾ: ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ದತ್ತಾ ಅವರು ಭಾವುಕರಾದರು. ನನ್ನ ಬೆಂಬಲಿಗರು ಕಣ್ಣೀರು ಹಾಕುತ್ತಿದ್ದಾರೆ. ಅವರಿಗೆ ಅನ್ಯಾಯ ಆಗಲು ಬಿಡಲ್ಲ. ಬೇರೆಯವರಿಗೆ ಟಿಕೆಟ್ ಘೋಷಣೆಯಾಗಿರುವುದು ಬೇಸರವಿಲ್ಲ. ಆದ್ರೆ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಬಹುದಿತ್ತು. ಸಮೀಕ್ಷೆ ಆಧರಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡ್ತಾರೆ ಎಂದು ನಂಬಿದ್ದೆ ಎಂದು ದತ್ತಾ ತಿಳಿಸಿದರು.

ಅಭಿಮಾನಿಗಳಿಗೆ ಪತ್ರ ಬರೆದಿದ್ದ ದತ್ತಾ: ಕಡೂರು ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ದತ್ತ ಅವರು ಅಭಿಮಾನಿಗಳಿಗೆ ಈ ಹಿಂದೆ ಭಾವುಕ ಪತ್ರ ಬರೆದಿದ್ದರು. ನಿಮ್ಮ ಜೊತೆ ನಾನಿರಬೇಕು, ನನ್ನ ಜೊತೆಗೆ ನೀವಿರಬೇಕು ಎಂಬುದು ಅನಿವಾರ್ಯವಾಗಿದೆ. ನೀವು ನನಗೆ ಪ್ರೀತಿಯ ಧಾರೆ ಎರೆದಿದ್ದೀರಿ. ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆಸಿದ್ದೀರಿ. ನನ್ನ ಮತ್ತು ನಿಮ್ಮೆಲ್ಲರ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನವಾಗಿದೆ ಎಂದು ಪತ್ರದಲ್ಲಿ ಬರೆದುಕೊಂಡಿದ್ದರು.

ಏ.9ರಂದು ಮುಂದಿನ ನಿರ್ಧಾರ ಪ್ರಕಟ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಏ.9 ರಂದು ದತ್ತಾ ಸಭೆ ಕರೆದಿದ್ದಾರೆ‌. ಈ ಸಭೆಯಲ್ಲಿ ಜನಾಭಿಪ್ರಾಯ ಸಂಗ್ರಹಿಸಿ ತಮ್ಮ ಮುಂದಿನ ನಡೆಯನ್ನು ದತ್ತಾ ನಿರ್ಧರಿಸಲಿದ್ದಾರೆ.

ಇದನ್ನೂ ಓದಿ: ಅಭಿಮಾನಿಗಳಿಗೆ ಭಾವುಕ ಪತ್ರ ಬರೆದ ದತ್ತಾ; ಅವರು ಇಂಟರ್‌ನ್ಯಾಷನಲ್ ಪಕ್ಷ ಸೇರ ಹೊರಟವರೆಂದ ಹೆಚ್‌ಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.