ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಧರ್ಮಪತ್ನಿ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಇವರು, ಗುರುಗಳ ದರ್ಶನ ಪಡೆದು ಶಾರದಾಂಬೆಗೆ ನಮಸ್ಕರಿಸುತ್ತೇನೆ. ಈಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಿ ನಾಳೆ ವಾಪಸ್ ಹೋಗುತ್ತೇನೆ. ಪ್ರತಿ ದಿನ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿ ಶಾರದಾಂಬೆ ದರ್ಶನ ಮಾಡಲು ಬಂದಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ
ನಂತರ ರಷ್ಯಾ ಯುದ್ಧದ ಬಗ್ಗೆ ಮಾತನಾಡಿ, ದಿಢೀರಾಗಿ ಯುದ್ಧ ಮಾಡೋದಾಗಿ ರಷ್ಯಾದ ಅಧ್ಯಕ್ಷರು ಹೇಳಿದ್ರು. ಆಗಲೇ ಉಕ್ರೇನ್ ಮೇಲೆ ಯುದ್ಧ ಶುರು ಮಾಡಿದ್ದಾರೆ. ಪ್ರಪಂಚದ ಅನೇಕ ರಾಷ್ಟ್ರಗಳು ಯುದ್ಧ ಬೇಡವೆಂದು ಹೇಳುತ್ತಿವೆ.
ಆದರೆ, ರಷ್ಯಾ ಮಾತ್ರ ತಾನು ನಿಲ್ಲಿಸುವುದಿಲ್ಲ ಅಂತ ಹೇಳುತ್ತಿದೆ. ಯುದ್ಧ ಶಮನವಾಗಬೇಕೆಂದು ನಮ್ಮ ಪ್ರಧಾನಮಂತ್ರಿಗಳು ಪ್ರಯತ್ನ ಮಾಡುತ್ತಿದ್ದಾರೆ. ರಷ್ಯಾದ ಪುಟಿನ್-ಮೋದಿಯವರು ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ದೇವೇಗೌಡರು ತಿಳಿಸಿದರು.