ETV Bharat / state

ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಬಂಧನ, ದೇವಸ್ಥಾನಕ್ಕೆ ಬೀಗ - ದೇವಸ್ಥಾನಕ್ಕೆ ಬೀಗ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣ ಸಂಬಂಧ ತರೀಕೆರೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ, ಗ್ರಾಮದಲ್ಲಿರುವ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ.

ದೇವಸ್ಥಾನಕ್ಕೆ ಬೀಗ
ದೇವಸ್ಥಾನಕ್ಕೆ ಬೀಗ
author img

By ETV Bharat Karnataka Team

Published : Jan 6, 2024, 7:57 AM IST

Updated : Jan 6, 2024, 1:14 PM IST

ಚಿಕ್ಕಮಗಳೂರು : ಊರೊಳಗೆ ದಲಿತ ಯುವಕ ಬಂದ ಎಂದು ಹಲ್ಲೆ ನಡೆಸಿದ ಆರೋಪ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಇನ್ನುಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಇನ್ನೊಂದೆಡೆ, ಊರಿನ ದೇವಾಲಯಕ್ಕೆ ಬೀಗ ಬಿದ್ದಿದೆ.

ತರೀಕೆರೆ ತಾಲೂಕಿನ ಗೇರು ಮರಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಜನವರಿ 1ರಂದು ಜೆಸಿಬಿ ಕೆಲಸದ ನಿಮಿತ್ತ ದಲಿತ ಯುವಕ ಬಂದಿದ್ದ. ಆತ ಕೆಲಸ ಮಾಡುವಾಗ ಕೇಬಲ್ ಕಟ್​ ಆಗಿದ್ದಕ್ಕೆ ಗ್ರಾಮದ ಹಲವರು ಯುವಕನಿಗೆ ಥಳಿಸಿ, ಆತನ ಬಳಿ ಇದ್ದ 20,000 ರೂ. ಹಣವನ್ನು ದಂಡವಾಗಿ ಕಟ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಇದನ್ನು ಖಂಡಿಸಿ ದಲಿತ ಸಂಘಟನೆಗಳು ಗ್ರಾಮಕ್ಕೆ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಗ್ರಾಮ ಅಪವಿತ್ರ ಆಯ್ತು ಎಂದು ಭಾವಿಸಿ, ಗೊಲ್ಲರಹಟ್ಟಿಯ ಕೆಲ ಗ್ರಾಮಸ್ಥರು ಅಲ್ಲಿನ ಎರಡು ದೇವಾಲಯಕ್ಕೆ ಬೀಗ ಹಾಕಿದ್ದಾರೆ.

ಈ ಕುರಿತು ತರೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಇತರ ಹನ್ನೊಂದು ಆರೋಪಿಗಳು ತಲೆಮರೆಸಿಕೊಂಡಿದ್ದು, ಡಿವೈಎಸ್​ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ದಲಿತ ಸಂಘಟನೆಗಳು ಗ್ರಾಮಕ್ಕೆ ಪ್ರವೇಶ ಮಾಡಿದ ಬಳಿಕ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜಾತಿ ನಿರ್ಮೂಲನೆ ಬಗ್ಗೆ ಗ್ರಾಮಸ್ಥರಿಗೆ ತಿಳುವಳಿಕೆ ಹೇಳಿದ್ದರು. ಆದರೆ, ಅಧಿಕಾರಿಗಳ ಮಾತನ್ನು ನಂಬದ ಗೊಲ್ಲರಹಟ್ಟಿ ಗ್ರಾಮಸ್ಥರು ಎರಡು ಮುಖ್ಯ ದೇವಾಲಯಗಳ ಬಾಗಿಲು ಬಂದ್​ ಮಾಡಿದ್ದಾರೆ.

ಇದನ್ನೂ ಓದಿ : ಜೆಸಿಬಿ ಚಾಲಕನ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ; ದಲಿತ ಸಂಘಟನೆಗಳಿಂದ ಪ್ರತಿಭಟನೆ

ಈ ಪ್ರಕರಣದ ಬಗ್ಗೆ ಮಾತನಾಡಿರುವ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೇಶ್ ಅವರು, ಪರಿಶಿಷ್ಟ ಜಾತಿ ಅವರನ್ನು ಕೀಳಾಗಿ ನೋಡುವುದು ತಪ್ಪು. ಇದು ಮತ್ತೆ ಪುನರಾವರ್ತನೆ ಆಗಬಾರದು ಎಂದು ಗೊಲ್ಲರಹಟ್ಟಿ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

Last Updated : Jan 6, 2024, 1:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.