ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23ಕ್ಕೆ ಏರಿದೆ.
ಆದ್ರೆ ದಾಖಲಾದ ಪ್ರಕರಣಗಳಲ್ಲಿ ಎರಡು ಪ್ರಕರಣ ಲ್ಯಾಬ್ ರಿಪೋರ್ಟ್ನಿಂದ ತಪ್ಪಾಗಿ ವರದಿ ಬಂದಿದ್ದವು. 16 ಜನ ಸೋಂಕಿತರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಆದರೆ ಇಂದು ಮತ್ತೆ 4 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ 3 ಪ್ರಕರಣ, ತರೀಕೆರೆ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ. 33 ವರ್ಷದ ಪುರುಷ, 38 ವರ್ಷದ ಮಹಿಳೆ, 12 ವರ್ಷದ ಹೆಣ್ಣು ಮಗು, ಎಂಟು ವರ್ಷದ ಗಂಡು ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇವರು ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್ ಡೌನ್ ಮಾಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಈ ನಾಲ್ಕು ಜನರು ಮಹಾರಾಷ್ಟ್ರ ಮೂಲದಿಂದ ಬಂದವರಾಗಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಈ ನಾಲ್ಕು ಜನರ ಜೊತೆಗಿನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಹುಡುಕುವ ಕಾರ್ಯ ಪ್ರಾರಂಭ ಮಾಡಿದೆ. ಸೋಂಕಿತರನ್ನು ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.