ಚಿಕ್ಕಮಗಳೂರು: ಪ್ರಪಂಚದಲ್ಲಿ ಪ್ರತಿನಿತ್ಯ ಹೊಸ ಹೊಸ ವಿಷಯಗಳು, ಆಸಕ್ತಿಕರ-ಆಶ್ಚರ್ಯಕರ ವಿಷಯಗಳು ನಮ್ಮ ಗಮನಕ್ಕೆ ಬಂದು ಹೇಗೆ, ಏನು? ಎಂಬ ಪ್ರಶ್ನೆಗೆ ದಾರಿ ಮಾಡಿಕೊಡುತ್ತವೆ. ಇದೀಗ ಚಿಕ್ಕಮಗಳೂರು ನಗರದ ಹೊಲವೊಂದರಲ್ಲಿನ ಈಚಲು ಮರದಲ್ಲಿ ಗಣಪನ ಆಕಾರ ಮೂಡಿದೆ. ಈ ಗಣಪನನ್ನು ಕಂಡು ಎಲ್ಲರೂ ಮೂಕವಿಸ್ಮಿತರಾಗಿದ್ದಾರೆ.
ಗಣಪನನ್ನೇ ಹೋಲುವ ಸೊಂಡಿಲು, ಕಣ್ಣು, ಕೈ, ದೇಹದ ಆಕಾರ ಮರದ ಬುಡದಲ್ಲಿ ಮೂಡಿದೆ. ಸ್ಥಳೀಯರು ಬಂದು ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಗರದಲ್ಲಿ ನಾಲ್ಕೈದು ಗಣಪತಿ ದೇವಸ್ಥಾನಗಳಿದ್ದು, ಎಲ್ಲ ಗಣಪತಿಗಳು ಪಶ್ಚಿಮ ದಿಕ್ಕಿಗೆ ಮುಖ ಮಾಡಿವೆ. ಆದರೆ ಈ ಈಚಲು ಮರದಲ್ಲಿ ಉದ್ಭವಿಸಿರುವ ಗಣಪತಿ ಪೂರ್ವ ದಿಕ್ಕಿಗೆ ಮುಖ ಮಾಡಿರೋದು ಕುತೂಹಲಕ್ಕೆ ಕಾರಣವಾಗಿದೆ.
ಒಟ್ಟಾರೆ ಈಚಲು ಮರದ ಬುಡದಲ್ಲಿ ಮೂಡಿರುವ ಗಣಪನ ಆಕಾರ ಎಲ್ಲರ ಅಚ್ಚರಿಗೆ ಕಾರಣವಾಗಿದ್ದು, ಸ್ಥಳೀಯರು ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ತಮ್ಮ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸುತ್ತಿದ್ದಾರೆ.
ಇದನ್ನೂ ಓದಿ: ನೈಋತ್ಯ ಮುಂಗಾರು ತುಸು ಚುರುಕು: ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ