ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡು ಕೋಣಗಳು ಹಾಗೂ ಕಾಡಾನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾಣ ಸಿಗುತ್ತಿವೆ. ಇನ್ನು, ಕಾಡಾನೆಗಳು ಕಾಫಿ ತೋಟಕ್ಕೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿವೆ. ಕಾಡು ಪ್ರಾಣಿಗಳ ಕಾಟದಿಂದ ಮಲೆನಾಡ ಜನತೆ ಕಂಗಾಲಾಗಿದ್ದಾರೆ.
ಇನ್ನು, ಎರಡು ಕಾಡುಕೋಣಗಳು ರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಅಡ್ಡ ಬಂದಿದೆ. ಅವುಗಳನ್ನು ಕಂಡ ಕಾರು ಚಾಲಕ ಬೆಚ್ಚಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆಯಲ್ಲಿ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ವಾಹನ ಚಾಲಕ ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ.
ಇನ್ನು, ಈ ಕಾಡುಕೋಣಗಳು ಬಳಿಕ ಕಾಫಿ ತೋಟದ ಮೂಲಕ ಕಾಡಿಗೆ ಮರಳಿದೆ.