ಚಿಕ್ಕಮಗಳೂರು: ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡ ಆರೋಪಿಗೆ ಜಿಲ್ಲೆಯ ತರೀಕೆರೆ ತಾಲೂಕು ಜೆಎಂಎಫ್ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಮೇಲಾಧಿಕಾರಿ ಸಹಿ ನಕಲು ಮಾಡಿ ಹಣ ದುರುಪಯೋಗ ಮಾಡಿಕೊಂಡಿದ್ದ ಆರೋಪಿ ಮೋಹನ್ ಕುಮಾರ್ಗೆ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಆರೋಪಿಯು ಸರ್ಕಾರಕ್ಕೆ 2 ಕೋಟಿ ರೂ. ದಂಡ ಕಟ್ಟಬೇಕು ಎಂದು ಕೋರ್ಟ್ ಆದೇಶಿಸಿದೆ.
ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ಆರೋಪಿ ಮೋಹನ್ ಕುಮಾರ್ ಒಂದು ಕೋಟಿಗೂ ಹೆಚ್ಚು ಹಣ ದುರುಪಯೋಗ ಮಾಡಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿತ್ತು. ಮೋಹನ್ ಕುಮಾರ್ ತರೀಕೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.