ETV Bharat / state

ಮೂರು ತಿಂಗಳಲ್ಲಿ ಮೂವರು ರೈತರು ಬಲಿ: ಕಾಡಾನೆ ಸ್ಥಳಾಂತರಕ್ಕೆ ಸರ್ಕಾರ ಆದೇಶ - ಕಾಡಾನೆ ದಾಳಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗುತ್ತಿದೆ. ಇತ್ತೀಚೆಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಆಕ್ರೋಶದಲ್ಲಿ ಸ್ಥಳೀಯರು ಶಾಸಕರ ಮೇಲೆ ಹಲ್ಲೆ ಮಾಡಿದ್ದರು. ಈ ಬೆನ್ನಲ್ಲೇ ಕಾಡಾನೆ ಸ್ಥಳಾಂತರಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

ಕಾಡಾನೆ ಸ್ಥಳಾಂತರಕ್ಕೆ ಸರ್ಕಾರ ಆದೇಶ
ಕಾಡಾನೆ ಸ್ಥಳಾಂತರಕ್ಕೆ ಸರ್ಕಾರ ಆದೇಶ
author img

By

Published : Nov 22, 2022, 7:43 AM IST

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಕಳೆದ ಮೂರು ತಿಂಗಳಲ್ಲಿ ತಿಂಗಳಿಗೆ ಒಬ್ಬರಂತೆ ಮೂವರು ರೈತರನ್ನು ಬಲಿ ಪಡೆದ ಕಾಡಾನೆಗಳನ್ನು ಹಿಡಿಯಲು ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಭಾಗದಲ್ಲಿ ಕಾಡಾನೆಗಳಿಂದ ಪ್ರಾಣ ಹಾನಿಯ ಜೊತೆಗೆ ಸಾಕಷ್ಟು ನಷ್ಟ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರುತ್ತಲೇ ಇದ್ದರು.

ಕಾಡಾನೆ ಸ್ಥಳಾಂತರಕ್ಕೆ ಸರ್ಕಾರ ಆದೇಶ
ಕಾಡಾನೆ ಸ್ಥಳಾಂತರಕ್ಕೆ ಸರ್ಕಾರ ಆದೇಶ

ಭಾನುವಾರ ಕೂಡ ತಾಲೂಕಿನ ಹುಲ್ಲೇಹಳ್ಳಿ-ಕುಂದೂರು ಭಾಗದಲ್ಲಿ ಕಾಡಾನೆ ದಾಳಿಯಿಂದ ಶೋಭಾ (35 ವರ್ಷ) ಎಂಬ ಮಹಿಳೆ ಸಾವನ್ನಪ್ಪಿದ್ದರು. ಇದರಿಂದ ಗ್ರಾಮಸ್ಥರು ರೊಚ್ಚಿಗೆದ್ದು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು‌. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ಬಳಿಕ ಸ್ಥಳಕ್ಕೆ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೂ ಗರಂ ಆಗಿ, ಹಲ್ಲೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸರ್ಕಾರ ಮೂಡಿಗೆರೆ ತಾಲೂಕಿನಲ್ಲಿರುವ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಿದೆ. ಆದರೆ, ಆನೆಗಳನ್ನು ಸೆರೆಹಿಡಿದು ಸ್ಥಳಾಂತರ ಮಾಡುವ ಬದಲು ಆನೆ ಹಾವಳಿಗೆ ಅರಣ್ಯದ ಅಂಚು ಹಾಗೂ ಗ್ರಾಮದಂಚಿನಲ್ಲಿ ದೊಡ್ಡ-ದೊಡ್ಡ ಹೊಂಡಗಳನ್ನು ಅಗೆದು ಅರಣ್ಯದಿಂದ ಹೊರಬಾರದಂತೆ ಶಾಶ್ವತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ.. ಸ್ಥಳಕ್ಕೆ ಹೋದ ಶಾಸಕನ ಮೇಲೆ ಹಲ್ಲೆ ಮಾಡಿ ಅಂಗಿ ಹರಿದ್ರಾ ಗ್ರಾಮಸ್ಥರು!?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.