ETV Bharat / state

ಮಳೆನಾಡಾಯ್ತು ಮಲೆನಾಡು ಚಿಕ್ಕಮಗಳೂರು.. ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ!

author img

By

Published : Jun 12, 2019, 12:59 PM IST

ಚಿಕ್ಕಮಗಳೂರಿನ ಸುತ್ತಮುತ್ತ ವರುಣನ ಅಬ್ಬರ ಜೋರಾಗಿದ್ದು, ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗೆ ಉರುಳಿ ಟ್ರಾಫಿಕ್​ ಜಾಮ್​ ಆಗಿದೆ.

ಮಳೆನಾಡಾಯ್ತು ಮಲೆನಾಡು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದೆ. ಬಾಳೆಹೊನ್ನೂರು, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಸೇರಿದಂತೆ ಮೂಡಿಗೆರೆಯ ಸುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆ ಸುರಿಯುತ್ತಿದೆ.

ಕಾಫಿ ನಾಡಿನಲ್ಲಿ ವರುಣನ ಅಬ್ಬರ

ಬೆಳಗ್ಗೆಯಿಂದಲೂ ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬಾಳೆಹೂನ್ನೂರು-ಚಿಕ್ಕಮಗಳೂರು ರಸ್ತೆಯಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿವೆ. ಬಾಳೆಹೊನ್ನೂರಿನ ಕಣತಿ ಬಳಿ ಮರಗಳು ರಸ್ತೆ ಮೇಲೆ ಉರುಳಿದ್ದರಿಂದಾಗಿ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಕೂಡ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕೆಲ ಕಾಲ ಪರದಾಡುವಂತಾಯ್ತು.

ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿ ಸಹಾಯದಿಂದ ಮರ ತೆರವು ಕಾರ್ಯಚರಣೆ ನಡೆಸಿದರು. ಈಗ ಮತ್ತೆ ನಿಧಾನವಾಗಿ ಟ್ರಾಫಿಕ್ ಜಾಮ್ ತಿಳಿಯಾಗುತ್ತಿದೆ. ಇತ್ತ ಚಾರ್ಮಾಡಿ ಘಾಟಿಯಲ್ಲಿಯೂ ಒಂದು ಮರ ಉರುಳಿದ್ದು ಅಲ್ಲಲ್ಲಿ ವಿದ್ಯುತ್ ಕಂಬಗಳು ಬಿದ್ದಿರುವ ವರದಿಯಾಗಿವೆ.

Intro:R_Kn_Ckm_01_12_Rain and Damage_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕ್ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು ಬಾಳೆಹೊನ್ನೂರು, ಕೊಟ್ಟಿಗೆಹಾರ,ಚಾರ್ಮಾಡಿ ಘಾಟಿ ಸೇರಿದಂತೆ ಮೂಡಿಗೆರೆಯ ಸುತ್ತ ಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ಬೆಳಗ್ಗೆಯಿಂದಲೂ ಕೆಲವು ಭಾಗದಲ್ಲಿ ತುಂತುರು ಮಳೆಯಾಗುತ್ತಿದ್ದು ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ಬಾಳೆಹೂನ್ನೂರು ಟು ಚಿಕ್ಕಮಗಳೂರು ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಧರೆಗೆ ಉರುಳಿದೆ. ಬಾಳೆಹೊನ್ನೂರಿನ ಕಣತಿ ಬಳಿ ಈ ಮರ ಉರುಳಿದ್ದು ಈ ಘಟನೆಯಿಂದಾ ಒಂದು ಗಂಟೆಗೂ ಅಧಿಕ ಕಾಲ ಟ್ರಾಪಿಕ್ ಜಾಮ್ ಉಂಟಾಗಿದೆ.ಇದೇ ಸಂದರ್ಭದಲ್ಲಿ ನೂತನ ಸಂಸದ ತೇಜಸ್ವಿ ಸೂರ್ಯ ಅವರು ಕೂಡ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಟ ನಡೆಸಿದ್ದು ಮರ ತೆರವು ಕಾರ್ಯ ನಡೆಯುವರೆಗೂ ಸ್ಥಳದಲ್ಲಿಯೇ ಕಾದು ಕುಳಿತಿದ್ದರು. ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂಧಿಗಳ ಸಹಾಯದಿಂದಾ ಮರ ತೆರವು ಕಾರ್ಯ ಮುಗಿದ್ದು ನಿಧಾನವಾಗಿ ಟ್ರಾಫಿಕ್ ಜಾಮ್ ತಿಳಿಯಾಗುತ್ತಿದೆ.ಇತ್ತ ಚಾರ್ಮಾಡಿ ಘಾಟಿಯಲ್ಲಿಯೂ ಒಂದು ಮರ ಉರುಳಿದ್ದು ಅಲ್ಲಲ್ಲಿ ವಿದ್ಯುತ್ ಕಂಬಗಳು ಬಿದ್ದಿರುವ ವರದಿ ಆಗುತ್ತಿದೆ. ಚಾರ್ಮಾಡಿ ಘಾಟಿಯಲ್ಲಿಯೂ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ......

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು.......

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.