ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಕಳೆದ ಮೂರು ದಿನಗಳಿಂದ ಮಧ್ಯಾಹ್ನದ ವೇಳೆ ಧಾರಾಕಾರ ಮಳೆ ಸುರಿಯುತ್ತಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ಥತೆ ಉಂಟಾಗಿದೆ. ಪ್ರಮುಖವಾಗಿ ಚಿಕ್ಕಮಗಳೂರು ನಗರ, ವಸ್ತಾರೆ, ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ಜಾವಳಿ, ಸುಂದರಬೈಲು, ಮಾಗುಂಡಿ, ಬಾಳೆಹೊನ್ನೂರು,ಜಯಪುರ ಸೇರಿದಂತೆ ಸುತ್ತ ಮುತ್ತಲ ಭಾಗದಲ್ಲಿ ವರುಣನ ಆರ್ಭಟವಿದೆ.
ಕಳೆದ ಒಂದು ತಿಂಗಳ ಹಿಂದೆ ಸುರಿದಿದ್ದ ಮಹಾ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ, ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈಗ ಮತ್ತೆ ಮಳೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆಮಾಡಿದೆ.