ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಜಿಲ್ಲೆಯ ಮಲೆನಾಡು ಭಾಗ ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಉತ್ತಮ ಹಾಗೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆ ಭದ್ರೆ ತುಂಬಿ ಹರಿಯುತ್ತಿದ್ದು, ಕಳಸದ ಬಳಿ ಇರುವ ಹೆಬ್ಬಾಳ ಸೇತುವೆಯ ಮೇಲೆ ನೀರು ಹರಿಯುತ್ತಿದೆ.
ಈ ಸೇತುವೆ ಮೂಲಕ ಸಂಪರ್ಕ ಹೊಂದಿದ್ದ ಕಳಸ - ಹೊರನಾಡು ರಸ್ತೆ ಬಂದ್ ಆಗಿದೆ. ಕುದುರೆಮುಖ, ಶೃಂಗೇರಿ, ಕೊಪ್ಪ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ನದಿಗಳ ಹರಿವಿನ ಮಟ್ಟದಲ್ಲಿಯೂ ಹೆಚ್ಚಳವಾಗುತ್ತಿದೆ. ಇದರಿಂದ ವಾಹನ ಸಂಚಾರ, ಜನಜೀವನಕ್ಕೆ ಸಂಪೂರ್ಣ ಅಡಚಣೆ ಉಂಟಾಗಿದೆ.