ಚಿಕ್ಕಮಗಳೂರು: ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಳೆಯಿಂದ ಸಂಚಾರ ವ್ಯವಸ್ಥೆಗೂ ಅಡಚಣೆ ಉಂಟಾಗಿದ್ದು, ಸವಾರರು ಪರದಾಡುವ ಸ್ಥಿತಿ ಎದುರಾಗಿದೆ.
ಇನ್ನು ಒಂದು ಗಂಟೆ ಸುರಿದ ಮಳೆಯಿಂದ ನಗರದ ಕೆಲ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡಿನ ಹಲವು ಭಾಗದಲ್ಲಿ ಗುಡುಗು ಮಿಶ್ರಿತ ಮಳೆಯಾಗುತ್ತಿದೆ.
ಚಿಕ್ಕಮಗಳೂರು ನಗರದ ಹೊರವಲಯ ಹಿರೇಮಗಳೂರಿನಲ್ಲಿ ಸುರಿದ ಮಳೆಯಿಂದ ಹಾನಿಯುಂಟಾಗಿದ್ದು, ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಹಾರಿ ವಿದ್ಯುತ್ ಟಿಸಿ ಮೇಲೆ ಬಿದ್ದಿದೆ. ಇದರಿಂದ ವಿದ್ಯುತ್ ತಂತಿ ತುಂಡಾಗಿದ್ದು, ಹಿರೇಮಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಖಡಿತವಾಗಿದೆ.