ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು, ಮಲೆನಾಡು ಭಾಗದಲ್ಲಿ ಇಂದು ಕೂಡ ಧಾರಾಕಾರ ಮಳೆ ಮುಂದುವರೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ನಿಡುವಾಳೆ, ಬಾಳೂರು ಸುತ್ತಮುತ್ತ ಭಾರೀ ಮಳೆ ಆಗುತ್ತಿದ್ದು, ಮಳೆ ನೀರು ನುಗ್ಗಿ ಉರ್ವಿನ್ ಖಾನ್ ಸೇತುವೆ ಮುಳುಗಡೆಯಾಗಿದೆ. ನಿಡುವಾಳೆಯಿಂದ ಉರ್ವಿನ್ ಖಾನ್ಗೆ ಹೋಗುವ ಸಂಪರ್ಕ ಕಡಿತವಾಗಿದ್ದು, ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಬಿಟ್ಟು-ಬಿಟ್ಟು ಸುರಿಯುತ್ತಿರೋ ಮಳೆಗೆ ಮಲೆನಾಡಿಗರು ಹೈರಾಣಿಗಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ.