ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ.
![Heavy Rain In Chikkamagaluru](https://etvbharatimages.akamaized.net/etvbharat/prod-images/kn-ckm-04-bagina-av-7202347_11082020165341_1108f_1597145021_443.jpg)
ಇನ್ನು ನಲ್ಲೂರು ಕೆರೆ ತುಂಬಿ ಹರಿಯುತ್ತಿದ್ದು, ಕೆರೆ ಕೋಡಿ ಬಿದ್ದಿದೆ. ಈ ಹಿನ್ನೆಲೆ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಸ್ಥಳೀಯರು ಕೆರೆಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಬಾಗಿನ ಅರ್ಪಿಸಿದರು.
ಗಿರಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ನಲ್ಲೂರು ಕೆರೆ ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆಲ ತಿಂಗಳ ಹಿಂದೆ ನಡೆದಿದ್ದ ಜಿಲ್ಲಾ ಉತ್ಸವದ ಕಾರ್ಯಕ್ರಮದಲ್ಲಿ ಈ ನಲ್ಲೂರು ಕೆರೆಯಲ್ಲಿ ಹಲವಾರು ಕ್ರೀಡಾ ಚಟುವಟಿಕೆಗಳನ್ನು ಜಿಲ್ಲಾಡಳಿತ ಆಯೋಜನೆ ಮಾಡಿತ್ತು.