ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಸಹ ವರುಣಾರ್ಭಟ ಮುಂದುವರೆದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮೂಡಿಗೆರೆ ನಗರ, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಾಳೂರು, ಜಾವಳ್ಳಿ, ಬಣಕಲ್ ಸುತ್ತಮುತ್ತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ಈ ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಂದು ಸುರಿಯುತ್ತಿರುವ ಧಾರಾಕಾರ ಮಳೆಗೆ ಈ ಭಾಗದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಹಲವಾರು ಭಾಗದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ.