ETV Bharat / state

ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆಯ ಅಬ್ಬರ ; ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತ

ಈ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೆಲ ದಿನಗಳ ಹಿಂದಷ್ಟೇ ಭತ್ತದ ನಾಟಿ ಮಾಡಲಾಗಿತ್ತು. ಈಗ ಸುರಿದ ಮಳೆ ರೈತರನ್ನು ಸಂಕಷ್ಟಕ್ಕೆ ದೂಡಿದೆ..

Heavy Rain In Chikkamagaluru
ಸಂಪೂರ್ಣ ಜಲಾವೃತಗೊಂಡ ಭತ್ತದ ಗದ್ದೆ
author img

By

Published : Sep 21, 2020, 7:33 PM IST

Updated : Sep 21, 2020, 7:50 PM IST

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಂದು ಮಧ್ಯಾಹ್ನದ ಬಳಿಕ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಹತ್ತಾರು ಎಕರೆ ಪ್ರದೇಶದಲ್ಲಿನ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ.

ಮಳೆಯ ಅಬ್ಬರದಿಂದ ಸಂಪೂರ್ಣ ಜಲಾವೃತಗೊಂಡ ಭತ್ತದ ಗದ್ದೆ

ಕೊಪ್ಪ ತಾಲೂಕಿನ ಹೊಲಗೋಡು ಗ್ರಾಮದ ಹಲವು ರೈತರ ಗದ್ದೆಗೆಳಿಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ನಾಟಿ ಮಾಡಿದ ಗದ್ದೆ ಮಳೆಯ ನೀರಿನಲ್ಲಿ ಸಂಪೂರ್ಣ ಮುಳುಗಡೆಯಾಗಿದೆ.

ಈ ಭಾಗದಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೆಲ ದಿನಗಳ ಹಿಂದಷ್ಟೇ ಭತ್ತದ ನಾಟಿ ಮಾಡಲಾಗಿತ್ತು. ಈಗ ಸುರಿದ ಮಳೆ ರೈತರನ್ನು ಸಂಕಷ್ಟಕ್ಕೆ ದೂಡಿದೆ.

Heavy Rain In Chikkamagaluru
ಸಂಪೂರ್ಣ ಜಲಾವೃತಗೊಂಡ ಭತ್ತದ ಗದ್ದೆ

ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳ ನೀರಿನ ಹರಿವಿನ ಮಟ್ಟದಲ್ಲಿ ಏರಿಕೆಯಾಗಿದೆ.

Last Updated : Sep 21, 2020, 7:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.