ಚಿಕ್ಕಮಗಳೂರು : ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಈವರೆಗೂ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನ ಕಂಗಾಲಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು, ಮಧುಗುಂಡಿ, ನಿಡುವಳೆ ಸೇರಿ ವಿವಿಧೆಡೆ ಅಬ್ಬರದ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಿರಂತರ ಮಳೆಯಿಂದ ಕಾಫಿ ಹಣ್ಣು ಉದುರಲು ಆರಂಭಿಸಿದ್ದು, ಬೆಳೆಗಾರರು ಚಿಂತೆಗೊಳಗಿದ್ದಾರೆ. ಈ ನಡುವೆ ಭಾರಿ ಮಳೆಗೆ ಹತ್ತಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಸಹ ಕಂಡು ಬಂದಿದೆ.
ಸಾಲದೆಂಬಂತೆ ಪೂರ್ವ ಕರಾವಳಿಯಲ್ಲಿ ಉಂಟಾಗಿರುವ ಗುಲಾಬ್ ಚಂಡಮಾರುತದ ಹಿನ್ನೆಲೆ, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುತ್ತಿದೆ.