ಚಿಕ್ಕಮಗಳೂರು: ನಗರದಲ್ಲಿ ಇಂದು ಮುಂಜಾನೆಯಿಂದಲೂ ಮಳೆ ಸುರಿಯುತ್ತಿದೆ. ಜೊತೆಗೆ ಮಲೆನಾಡು ಭಾಗ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರು ನಗರ ಪ್ರದೇಶ ಸೇರಿದಂತೆ ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ, ಕುದುರೆಮುಖದಲ್ಲಿ ಭಾರೀ ಮಳೆಯಾಗುತ್ತಿದೆ. ನಗರ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ವಾಹನ ಸಂಚಾರದಲ್ಲಿಯೂ ಅಡಚಣೆ ಉಂಟಾಗಿದ್ದು, ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮಲೆನಾಡಿನ ಕೆಲ ಗ್ರಾಮದಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ನಿರಂತರ ಮಳೆಯ ಕಾರಣ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.