ಚಿಕ್ಕಮಗಳೂರು: ಕೊರೊನಾ ವೈರಸ್ ಭೀತಿ ಹಾಗೂ ಲಾಕ್ಡೌನ್ ನಡುವೆ ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ದಿನಗಳಿಂದ ಧಾರಾಕಾರ ಮಳೆ ಸುರಿಯಲು ಪ್ರಾರಂಭ ಆಗಿದೆ. ಇಂದು ಸಂಜೆಯಿಂದಲೂ ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಆಗುತ್ತಿದ್ದು, ನಗರದಲ್ಲಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ ಉಂಟಾಗಿತ್ತು.
ಇನ್ನು ಜಿಲ್ಲೆಯ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ, ಶೃಂಗೇರಿ ಸೇರಿದಂತೆ ಬಯಲುಸೀಮೆ ತಾಲೂಕಿನ ಕೆಲ ಭಾಗದ ಸುತ್ತಮುತ್ತ ಮಳೆಯಾಗಿದೆ. ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭೂಮಿಗೆ ತಂಪಾಗಿದ್ದು, ಗುಡುಗು-ಸಿಡಿಲಿನೊಂದಿಗೆ ಇಂದು ವರುಣನ ಆಗಮನವಾಗಿದೆ.
ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನರು ಹಾಗೂ ರೈತರು ಸಂತಸಗೊಂಡಿದ್ದಾರೆ. ಇದರ ಮಧ್ಯೆ ನಗರದ ಹಲವಾರು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನರು ಕತ್ತಲಲ್ಲಿ ಕಾಲ ಕಳೆಯುವಂತಾಯಿತು.