ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದಗಿ ಜಿಲ್ಲೆಯ ಬಾಳೆಹೊನ್ನೂರಿನಿಂದ ಮಡಬೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅಬ್ಬಿಹಳ್ಳ ಸೇತುವೆ ಮಳೆಯಿಂದ ಕೊಚ್ಚಿ ಹೋಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
ಸೇತುವೆ ಕಡಿತಗೊಂಡ ಪರಿಣಾಮ ಮಕ್ಕಳು ಶಾಲೆಗೆ ಹೋಗಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮದ ಜನ ಕೂಡ ಇತರ ಗ್ರಾಮಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಸೇತುವೆ ಸರಿಪಡಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.