ETV Bharat / state

ಮಲೆನಾಡಲ್ಲಿ ವರುಣನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತ: ನದಿಗಳಲ್ಲಿ ನೀರಿನ ಭೋರ್ಗರೆತ

ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮಂದುವರೆದಿದ್ದು, ತುಂಗಾ-ಭದ್ರಾ, ಹೇಮಾವತಿ ಜಲಾಶಯಗಳ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಮಲೆನಾಡಿನಲ್ಲಿ ಮುಂದುವರಿದ ಮಳೆ: ಜನಜೀವನ ಅಸ್ತವ್ಯಸ್ತ
author img

By

Published : Sep 5, 2019, 5:01 PM IST

Updated : Sep 5, 2019, 7:09 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಹಿಂದೆ ಸುರಿದಿದ್ದ ಮಹಾಮಳೆಗೆ ಜನರು ನಲುಗಿದ್ದರು. ಈಗ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಲೆನಾಡಿನಲ್ಲಿ ಮುಂದುವರಿದ ಮಳೆ: ಜನಜೀವನ ಅಸ್ತವ್ಯಸ್ತ

ಹೌದು, ಮೂರು ದಿನಗಳಿಂದ ನಿರಂತರವಾಗಿ ಮೂಡಿಗೆರೆ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ನಿರಾಶ್ರಿತ ಕೇಂದ್ರದಿಂದ ಊರಿಗೆ ತೆರಳಿದ್ದ ಮಂದಿ ಮತ್ತೆ ಊರು ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಎನ್.ಆರ್.ಪುರ, ಶೃಂಗೇರಿ, ಕೊಪ್ಪದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೇ, ಮೂಡಿಗೆರೆಯಲ್ಲಿ ಮಾತ್ರ ಮಳೆರಾಯನ ಅಬ್ಬರ ಜೋರಾಗಿದೆ. ಮೂಡಿಗೆರೆಯ ಚಾರ್ಮಾಡಿ ಘಾಟಿ, ಜಾವಳಿ, ಊರಬಗೆ, ಹೊಸಕೆರೆ, ಕಳಸ, ದುರ್ಗದಹಳ್ಳಿ, ಬಣಕಲ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಗ್ರಾಮೀಣ ಭಾಗದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಶಾಲಾ-ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Intro:Kn_Ckm_02_Heavy rain_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಎಂಟೇ ದಿನದ ಮಹಾ ಮಳೆಗೆ ಮಲೆನಾಡು ಜನರ ಬದುಕನ್ನೇ ಮಣ್ಣಾಗಿಸಿದ್ದ ಜಲರಾಕ್ಷಸ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಕ್ಕೆ ಮತ್ತೆ ಹಿಂದಿರುಗಿದ್ದಾನೆ. ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಮಲೆನಾಡಿಗರು ದಾರಿ ಕಾಣದಂತಾಗಿದ್ದಾರೆ. ಮೂಡಿಗೆರೆ ತಾಲೂಕಿನಾದ್ಯಂತ ಸುರಿಯುತ್ತಿರೋ ಮಳೆ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ನಿರಾಶ್ರಿತ ಕೇಂದ್ರದಿಂದ ಊರಿಗೆ ತೆರಳಿದ್ದೋರು ಮತ್ತೆ ಊರು ಬಿಡುವ ಸ್ಥಿತಿ ನಿರ್ಮಾಣವಾಗಿದೆ. ಎನ್.ಆರ್.ಪುರ, ಶೃಂಗೇರಿ, ಕೊಪ್ಪದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೇ, ಮೂಡಿಗೆರೆಯಲ್ಲಿ ಮಾತ್ರ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮೂಡಿಗೆರೆಯ ಚಾರ್ಮಾಡಿ ಘಾಟ್, ಜಾವಳಿ, ಊರಬಗೆ, ಹೊಸಕೆರೆ, ಕಳಸ, ದುರ್ಗದಹಳ್ಳಿ, ಬಣಕಲ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗ್ರಾಮೀಣ ಭಾಗದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮರಗಳು ಧರೆಗುರುಳಿವೆ. ಶಾಲಾ-ಕಾಲೇಜಿಗೆ ಹೋದ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಲು ಹರಸಾಹಸ ಪಡುತ್ತಿದ್ದಾರೆ. ಭಾರೀ ಮಳೆಯಿಂದ ತುಂಗಾ-ಭದ್ರಾ, ಹೇಮಾವತಿ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

Conclusion:ರಾಜಕುಮಾರ್.....
ಈ ಟಿವಿ ಭಾರತ್.....
ಚಿಕ್ಕಮಗಳೂರು.....
Last Updated : Sep 5, 2019, 7:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.