ಚಿಕ್ಕಮಗಳೂರು: ಕರಾವಳಿಯಿಂದ ಕಾಫಿನಾಡಿಗೆ ಹಿಜಾಬ್ ವಿವಾದ ಮತ್ತೆ ಕಾಲಿಟ್ಟಂತೆ ಕಾಣಿಸುತ್ತಿದೆ. ಈ ಹಿಂದೆ ಕೊಪ್ಪ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಸುಖಾಂತ್ಯವಾಗಿತ್ತು. ಆದರೆ, ಈ ಗೊಂದಲ ಈಗ ಮತ್ತೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಪ್ರಾರಂಭವಾಗಿದೆ.
ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯ ವಿರುದ್ಧ ಯುವಕರು ಕೇಸರಿ ಶಾಲು ಧರಿಸಿ ಬಂದು ಪ್ರತಿಭಟನೆ ನಡೆಸುತ್ತಿದ್ದು, ಚಿಕ್ಕಮಗಳೂರು ನಗರದ ಇಂದಾವರ ದೊಡ್ದಸಿದ್ದಲಿಂಗೇಗೌಡ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಧರಣಿ ಮಾಡುತ್ತಿದ್ದಾರೆ. ಯಾರಿಗೂ ಹಿಜಾಬ್ ಧರಿಸಲು ಅವಕಾಶ ಕೊಡದಂತೆ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದು, ಸಮಸ್ಯೆ ಬಗೆಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡುತ್ತಿದ್ದಾರೆ.
ಜಾತಿ-ಧರ್ಮ ಬದಿಗಿಟ್ಟು ಕಾಲೇಜಿನಲ್ಲಿ ಎಲ್ಲರೂ ಒಟ್ಟಾಗಿ ಕಲಿಯೋಣ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: ಹಿಜಾಬ್ ಹೆಸರಿನಲ್ಲಿ ನಮ್ಮ ಪ್ರದೇಶವನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ: ಕಟೀಲ್ ಕಿಡಿ