ETV Bharat / state

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಮಸ್ಯೆ ನಿಭಾಯಿಸಲು ಸೂಕ್ತ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

author img

By

Published : Aug 16, 2021, 7:26 AM IST

ಬೆಂಗಳೂರಿನಲ್ಲಿ ಅಕ್ರಮ ವಲಸಿಗರನ್ನು ನಿಯಂತ್ರಿಸಲು ಬಹಳಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ, ವೀಸಾ ಅವಧಿ ಮುಗಿದವರನ್ನು ಅರೆಸ್ಟ್​ ಮಾಡಬೇಕು ಅಥವಾ ಗಡಿಪಾರು ಮಾಡಬೇಕು ಅಂತ ಸೂಚಿಸಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ತಲೆದೋರುತ್ತಿರುವ ಅಕ್ರಮ ವಲಸಿಗರ ಸಮಸ್ಯೆಯ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಮಸ್ಯೆ: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಹಲವಾರು ವಲಸಿಗರು ಉದ್ದೇಶಪೂರ್ವಕವಾಗಿಯೇ ಸಣ್ಣಪುಟ್ಟ ಕೇಸ್​ ಹಾಕಿಸಿಕೊಳ್ಳುತ್ತಾರೆ. ಈ ಪ್ರಕರಣ ಇತ್ಯರ್ಥ ಆಗುವುದರೊಳಗೆ ಅವರು ಹೊರಗೆ ಹೋಗುವ ಹಾಗಿಲ್ಲ. ಹಾಗಾಗಿ ಇಲ್ಲೇ ನೆಲೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದರು.

ಯಾರ ವೀಸಾ ಅವಧಿ ಮುಗಿದಿದೆಯೋ ಅವರನ್ನು ಅರೆಸ್ಟ್​ ಮಾಡಬೇಕು ಅಥವಾ ಗಡಿಪಾರು ಮಾಡಬೇಕು ಅಂತ ಹೇಳಿದ್ದೇನೆ. ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಮಸ್ಯೆ ಬಹಳ ದೊಡ್ಡ ಪ್ರಮಾಣದಲ್ಲಿದೆ. ಅದನ್ನು ನಿಭಾಯಿಸಲು ಸರಿಯಾದ ವ್ಯವಸ್ಥೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಕೊರೊನಾವನ್ನು ಧೈರ್ಯದಿಂದ ಎದುರಿಸುವ ಮನಃಶಕ್ತಿ ಬೇಕು: ನಟಿ ಭಾವನಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.