ಚಿಕ್ಕಮಗಳೂರು: 2019ರ ಮಹಾ ಮಳೆಯಿಂದ ಮನೆ, ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲೆಯ ಕಳಸ ಪಟ್ಟಣದಲ್ಲಿ ಸಂತ್ರಸ್ತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಈ ಭಾಗದ ಜನರಿಗೆ ಯಾವುದೇ ರೀತಿಯ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ. ಈ ಹಿನ್ನೆಲೆಲಯಲ್ಲಿ ಧರಣಿ ನಡೆಸುತ್ತಿದ್ದಾರೆ. ನಮ್ಮನ್ನು ಬದುಕಲು ಬಿಡಿ, ಇಲ್ಲವೇ ದಯಾ ಮರಣಕ್ಕೆ ಅವಕಾಶ ಕೊಡಿಯೆಂದು ರಾಜ್ಯಪಾಲರಿಗೆ ಪತ್ರವನ್ನು ಬರೆದು ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ.
ಈ ಭಾಗದ ಸಂತ್ರಸ್ತರ ಹಿತಕಾಯಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ. ಕೂಡಲೇ ಸರ್ಕಾರ ನಮ್ಮ ಸಮಸ್ಯೆಯನ್ನು ಬಗೆಹರಿಸಿ ಎಲ್ಲರಂತೆ ಜೀವನ ಸಾಗಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ: ಮಂಡ್ಯ: ದೇವಸ್ಥಾನದಲ್ಲಿ ಕುಸಿದುಬಿದ್ದು 8 ತಿಂಗಳ ಗರ್ಭಿಣಿ ಸಾವು