ಚಿಕ್ಕಮಗಳೂರು: ಚಿಕ್ಕಮಗಳೂರಿನ ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯಲ್ಲಿರುವ ತುಂಗಾ, ಭದ್ರಾ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.
ಇದೇ ಮೊದಲ ಬಾರಿಗೆ ಕಳಸ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ನಿರಂತರವಾಗಿ ನಾಲ್ಕು ದಿನಗಳ ಕಾಲ ಸೇತುವೆ ಮುಳುಗಡೆಯಾಗಿದ್ದು, ಕಂಡು ಕೇಳರಿಯದ ಮಳೆಗೆ ಮಲೆನಾಡಿನ ಜನರು ಕಂಗಾಲಾಗಿದ್ದಾರೆ.
ನದಿಯ ಅಕ್ಕ ಪಕ್ಕದ 1 ಕಿಲೋ.ಮೀಟರ್ಗೂ ಅಧಿಕ ಪ್ರದೇಶದಲ್ಲಿ ಭದ್ರಾ ನದಿ ನೀರು ಆವರಿಸಿಕೊಂಡಿದ್ದು, ಹೊರನಾಡು - ಕಳಸ ಸಂಪರ್ಕ ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿದೆ.