ಚಿಕ್ಕಮಗಳೂರು: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಕಳ್ಳನನ್ನು ಬಂಧಿಸುವಲ್ಲಿ ಬಾಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಗೇಂದ್ರಪ್ಪ ಬಂಧಿತ ಆರೋಪಿ. ಜಿಲ್ಲೆಯ ಎನ್.ಆರ್. ಪುರ ಪಟ್ಟಣದ ಲಿಯೋ ತಾವೂರ್ ಎಂಬುವರ ಮನೆಗೆ ಯಾರೂ ಇಲ್ಲದ ವೇಳೆ ಬಂದ ಕಳ್ಳನೊಬ್ಬ, ಮನೆಯ ಬೀಗ ಮುರಿದು 2.20 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಈ ಕುರಿತು ಲಿಯೋ ತಾವೂರ್ ಅವರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಸದ್ಯ ಬಾಳೆಹೊನ್ನೂರು ಪೊಲೀಸರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತನಿಂದ 2.20 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.