ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಮಳೆಯ ಆರ್ಭಟಕ್ಕೆ ಹಲವು ಕಡೆಗಳಲ್ಲಿ ಮನೆಗಳು ಕುಸಿತ ಕಂಡಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ದಿಣ್ಣೆಕೆರೆಯಲ್ಲಿ ದಿನೇಶ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ಕುಸಿತ ಕಂಡಿದ್ದು, ಮನೆಯ ಅವಶೇಷಗಳ ಅಡಿ ಸಿಲುಕಿದ್ದ ಆಹಾರ ಸಾಮಗ್ರಿಗಳನ್ನು ಹುಡುಕುವ ಮನಕಲಕುವ ದೃಶ್ಯ ನಿಜಕ್ಕೂ ಕರುಳು ಹಿಂಡುವಂತಿದೆ. ಕೂಡಿಟ್ಟ ಹಣ ಹಾಗೂ ಆಹಾರ ಸಾಮಗ್ರಿಗಾಗಿ ಹುಡುಕಾಟ ನಡೆಸಿದ್ದು, ಮನೆ ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಕಳಸ ತಾಲೂಕಿನ ಕೆಳಗೂಡು ಗ್ರಾಮದಲ್ಲಿ ಹರೀಶ್ ಎಂಬುವರ ಮನೆ ಮೇಲ್ಚಾವಣಿ ಕುಸಿದಿದ್ದು, ತರೀಕೆರೆ ತಾಲೂಕಿನ ಮೂರು ಮನೆಗಳ ಗೋಡೆ ಕುಸಿತ ಉಂಟಾಗಿದೆ. ಬಾವಿಕೆರೆ ಗ್ರಾಮದ ಬಸಪ್ಪ ಹಾಗೂ ಗಂಗಾಭವಿ ಎಂಬವರ ಮನೆ, ಬಿ.ರಾಮನಹಳ್ಳಿ ಗ್ರಾಮದ ದುರ್ಗಮ್ಮ ಎಂಬುವರ ಮನೆ ಗೋಡೆಯೂ ಹಾನಿ ಆಗಿದೆ. ಭಾರಿ ಮಳೆಗೆ ಮಲೆನಾಡು ಭಾಗದ ಜನರು ಭಯದಿಂದಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ : ಯಮುನಾ ನದಿಯಲ್ಲಿ ಮುಳುಗಿದ ದೋಣಿ.. 11 ಮೃತದೇಹ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ