ಚಿಕ್ಕಮಗಳೂರು: ಹೈದ್ರಾಬಾದ್ನಲ್ಲಿ ಪಶುವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.
ಅಲ್ದೂರು ಪಟ್ಟಣದಲ್ಲಿ ಸಂಭ್ರಮಿಸಿದ ಸಾರ್ವಜನಿಕರು, ಅತ್ಯಾಚಾರಿಗಳಿಗೆ ತಕ್ಕ ಶಿಕ್ಷೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಆರೋಪಿಗಳ ಹತ್ಯೆ ಮೂಲಕ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಸಿಕ್ಕಿದೆ ಎಂದರು.