ಚಿಕ್ಕಮಗಳೂರು: ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ ವಿಚಾರವಾಗಿ ನಾನು ತಲೆ ಹಾಕಲ್ಲ. ಅದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಸಿ.ಟಿ.ರವಿ, ಬೆಂಗಳೂರು ಉಸ್ತುವಾರಿ ಬಗ್ಗೆ ನಾನು ಮಾತನಾಡಲ್ಲ. ಯಾರಿಗೆ ಉಸ್ತುವಾರಿ ಕೊಡ್ಬೇಕು ಅನ್ನೋದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಆಯಾ ಜಿಲ್ಲೆಯ ಪರಿಸ್ಥಿತಿ ಆಧರಿಸಿ ಅವರು ತೀರ್ಮಾನ ತೆಗೆದುಕೊಳ್ತಾರೆ. ಇದರ ಬಗ್ಗೆ ನಾವೇನೂ ಹೇಳಲು ಹೋಗುವುದಿಲ್ಲ ಎಂದರು.
ಪಕ್ಷದ ಸಲಹೆ ಕೇಳಿದರೆ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇದ್ದಾರೆ. ಅವರು ಸಲಹೆ ಕೊಡಬಹುದು ಎಂದು ಸಿ.ಟಿ.ರವಿ ಅಭಿಪ್ರಾಯಪಟ್ಟರು. ಬೆಂಗಳೂರು ಉಸ್ತುವಾರಿ ಸಂಬಂಧ ಬಿಜೆಪಿ ನಾಯಕರಲ್ಲಿ ಗೊಂದಲ ಉಂಟಾಗಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಉಸ್ತುವಾರಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿದೆ.
(ನಾನು ಉಸ್ತುವಾರಿ ಆಕ್ಷಾಂಕ್ಷಿ ಅಲ್ಲ, ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ : ಸಚಿವ ಆರ್ ಅಶೋಕ್)