ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಲಾಕ್ಡೌನ್ ಮಧ್ಯೆಯೂ ಕಳ್ಳಭಟ್ಟಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ತ್ರಿಪುರ ಗ್ರಾಮದಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಬಣಕಲ್ ಇನ್ಸ್ಪೆಕ್ಟರ್ ಶ್ರೀನಾಥ್ ರೆಡ್ಡಿ ಹಾಗೂ ಕೆಲ ಸಿಬ್ಬಂದಿ ದಾಳಿ ಮಾಡಿದ್ದು, ಮಣಿ ಎಂಬ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.
ಕಳ್ಳಭಟ್ಟಿ ಕೊಳೆ ನಾಶಪಡಿಸಿ, 40 ಲೀಟರ್ ಕಳ್ಳಭಟ್ಟಿ ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಬಣಕಲ್ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.