ಚಿಕ್ಕಮಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಖಚಿತ ಮಾಹಿತಿಯನ್ನಾಧರಿಸಿ ಬಣಕಲ್ ಪೊಲೀಸರು ಬಂಧಿಸಿದ್ದಾರೆ.
ಅಬೂಬಕ್ಕರ್ ಸಿದ್ದಿಕ್ ಹಾಗೂ ಇಬ್ರಾಹಿಂ ಬಂಧಿತ ಆರೋಪಿಗಳು. ಇವರು ಮೂಡಿಗೆರೆ ತಾಲೂಕಿನ ಮಂಗಳೂರು-ವಿಲ್ಲುಪುರಂ ರಸ್ತೆ ಬದಿಯ ಅತ್ತಿಗೆರೆ ಗ್ರಾಮದ ಬಳಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಿ ಮಾರಟ ಮಾಡುತ್ತಿದ್ದರು. ಈ ಕುರಿತ ಮಾಹಿತಿ ಪಡೆದ ಬಣಕಲ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 130 ಗ್ರಾಂ ಒಣ ಕಡ್ಡಿ ಸೊಪ್ಪು ಮತ್ತು ಬೀಜ ಮಿಶ್ರಿತ ಗಾಂಜಾ ಸೇರಿದಂತೆ ಸಾಗಾಟಕ್ಕೆ ಬಳಸಲಾಗಿದ್ದ ಫೋರ್ಡ್ ಐಕಾನ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.