ETV Bharat / state

ಚುನಾವಣಾ ಚೆಕ್​ಪೋಸ್ಟ್ ಕಾರ್ಯ ಚುರುಕು​: ಚಿಕ್ಕಮಗಳೂರು ಜಿಲ್ಲೆಗೆ 4ನೇ ಸ್ಥಾನ - ಚುನಾವಣಾ ಅಕ್ರಮ

ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚೆಕ್​ ಪೋಸ್ಟ್​ಗಳು ಹೆಚ್ಚಾಗಿದ್ದು, ಅಕ್ರಮ ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಚಿಕ್ಕಮಗಳೂರು ಜಿಲ್ಲೆ 4ನೇ ಸ್ಥಾನ ಗಿಟ್ಟಿಸಿಕೊಂಡಿದೆ.

illegal
ಅಕ್ರಮ ಹಣ ವಶಪಡಿಸಿಕೊಂಡಿರುವ ಅಧಿಕಾರಿಗಳು
author img

By

Published : Apr 7, 2023, 10:30 PM IST

ಚಿಕ್ಕಮಗಳೂರು : ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಾಕಷ್ಟು ಶ್ರಮ ವಹಿಸುತ್ತಿದೆ. ಈವರೆಗೂ 9.5 ಕೆಜಿ ಚಿನ್ನ, ಲಕ್ಷಾಂತರ ರೂ ಹಣ, ಗಿಫ್ಟ್ ನೀಡಲು ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿ ಕೊಳ್ಳಲಾಗಿದ್ದು ಕಾರ್ಯಾಚರಣೆಯಲ್ಲಿ ರಾಜ್ಯದಲ್ಲೇ ಜಿಲ್ಲೆಗೆ ನಾಲ್ಕನೇ ಸ್ಥಾನ ಪಡೆದಿದೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಸೊಂಟಕ್ಕೆ ನೋಟು ಕಟ್ಟಿಕೊಂಡು ಸಾಗಣೆ: ಇಬ್ಬರನ್ನ ವಶಕ್ಕೆ ಪಡೆದ ಪೊಲೀಸರು

9,10,920 ರೂ ಮೌಲ್ಯದ 6,250 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಜೀನ್ಸ್ ಪ್ಯಾಂಟ್​ಗಳನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ. ಇದರ ಬೆಲೆ 2 ಲಕ್ಷ 50 ಸಾವಿರ ರೂಪಾಯಿ. ಕೊಪ್ಪ ತಾಲೂಕಿನ ಗಡಿಕಲ್ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 2 ಲಕ್ಷ 80 ಸಾವಿರ ಹಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

ಸೊಂಟದ ಸುತ್ತ ಹಣ ಕಟ್ಟಿಕೊಂಡು ಸಾಗಾಟ: ದಾವಣಗೆರೆಯಲ್ಲಿ ಇಬ್ಬರು ವ್ಯಕ್ತಿಗಳು ಸೊಂಟದ ಸುತ್ತ ಹಣ ಕಟ್ಟಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಣೆ ಮಾಡುತ್ತಿದ್ದರು. ಈ ಇಬ್ಬರನ್ನು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್​ಪೋಸ್ಟ್​ನಲ್ಲಿ ಹಿಡಿದು ಹಣ ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ಒಟ್ಟು ಸುಮಾರು 7.5 ಲಕ್ಷ ರೂಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಗಡಿಯಲ್ಲಿ ಪೊಲೀಸರ ಸರ್ಪಗಾವಲು..142 ಕೆಜಿ ಬೆಳ್ಳಿ ಕಾಲುಂಗುರ ವಶ, ಎಫ್​ಐಆರ್ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.