ಚಿಕ್ಕಮಗಳೂರು : ಅಕ್ರಮವಾಗಿ ಮನೆಯ ಆವರಣದಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಾಸಿರ್ ಎಂಬ ವ್ಯಕ್ತಿ, ಮನೆಯ ಆವರಣದಲ್ಲಿ ಅಕ್ರಮವಾಗಿ 2 ಲಾರಿಯಷ್ಟು ಮರಳು ಶೇಖರಣೆ ಮಾಡಿದ್ದ. ಸಾರಗೋಡು ಹಳ್ಳದಿಂದ ಅಕ್ರಮವಾಗಿ ಈ ಮರಳನ್ನು ತೆಗೆಯಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮರಳನ್ನು ವಶಕ್ಕೆ ಪಡೆದಿದ್ದಾರೆ. ರಿಯಾಜ್ ಹಾಗೂ ನಾಸಿರ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ. ಬಾಳೂರು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.