ಚಿಕ್ಕಮಗಳೂರು: ಇಂದಿರಾ ಗಾಂಧಿ ಅವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.
ಜಿಲ್ಲೆಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದ ಮೂಲಕ ರಸ್ತೆಯುದ್ದಕ್ಕೂ ಮೆರವಣಿಗೆ ಮಾಡಿ, ಒಕ್ಕಲಿಗರ ಸಭಾಭವನಕ್ಕೆ ಆಗಮಿಸಿದರು. ಕಾರ್ಯಕ್ರಮ ಪ್ರಾರಂಭವಾದ ಸ್ವಲ್ವ ಸಮಯದಲ್ಲಿಯೇ ವೇದಿಕೆ ಮೇಲೆ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ ನಿದ್ದೆಗೆ ಜಾರಿದರು. ಇಂದಿರಾ ಗಾಂಧಿ ಅವರ ಪುಸ್ತಕ ಓದುತ್ತಿದ್ದಂತೆಯೇ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ರು.