ETV Bharat / state

ಸಿಎಂ ಬಿಎಸ್​ವೈ ಬದಲಾವಣೆ ಮಾಡಬಾರದು: ದೇಶಿಕೇಂದ್ರ ಸ್ವಾಮೀಜಿ ಒತ್ತಾಯ - ಚಿಕ್ಕಮಗಳೂರು ನ್ಯೂಸ್

ಯಡಿಯೂರಪ್ಪ ಅವರು ದಕ್ಷ, ಪ್ರಾಮಾಣಿಕ, ಸಮರ್ಥ, ನಾಯಕ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಸರಿಯಲ್ಲ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.

Jnanaprabhu Sri Guru Siddharam Desi Kendra Swamiji
ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ
author img

By

Published : Jul 22, 2021, 7:34 AM IST

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಜಿಲ್ಲೆಯ ಕಡೂರು ತಾಲೂಕಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.

ದಕ್ಷ, ಪ್ರಾಮಾಣಿಕ, ಸಮರ್ಥ, ನಾಯಕ ಬಿ.ಎಸ್. ಯಡಿಯೂರಪ್ಪ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಇಂತಹ ವ್ಯಕ್ತಿಯನ್ನು ಅಧಿಕಾರದಿಂದ ಕೆಳಗಿಳಿಸುವುದು ಸರಿಯಲ್ಲ. ಕಳೆದ ಎರಡು ವರ್ಷಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿರುವುದನ್ನು ಲೆಕ್ಕಿಸದೇ, ನಾಡಿಗಾಗಿ ಅವರು ಹೋರಾಟ ಮಾಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮನಗಾಣಬೇಕು ಎಂದು ಒತ್ತಾಯಿಸಿದರು.

ಸಿಎಂ ಬದಲಾವಣೆ ಮಾಡದಂತೆ ದೇಶಿಕೇಂದ್ರ ಸ್ವಾಮೀಜಿ ಒತ್ತಾಯ

ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆಗಳನ್ನು ನೀಡಿರುವುದನ್ನು ನಾವು ನೋಡಿದ್ದೇವೆ. ಅವರಿಗೆ ಪೂರ್ಣವಾದ ಅವಕಾಶ ನೀಡಬೇಕು. ಎರಡು ಬಾರಿಯೂ ಬಿಜೆಪಿ ಬಹುಮತ ಪಡೆಯಲಿಲ್ಲ, ಆದರೆ, ಎಲ್ಲರನ್ನು ಒಗ್ಗೂಡಿಸಿಕೊಂಡು ದಕ್ಷತೆಯಿಂದ ಯಡಿಯೂರಪ್ಪ ಆಡಳಿತ ನಡೆಸಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಬಾರದು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.