ಚಿಕ್ಕಮಗಳೂರು: ಕೊರೊನಾ ಸೋಂಕಿಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೃತಪಟ್ಟಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತೋಟದೂರು ಶ್ರೀನಿವಾಸ್ ಹೆಬ್ಬಾರ್ (54) ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಶ್ರೀನಿವಾಸ್ ಹೆಬ್ಬಾರ್ ಪ್ರಸ್ತುತ ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾಗಿ, ರೋಟರಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಮತ್ತು ಧಾರ್ಮಿಕ ಕ್ಷೇತ್ರ, ಕನ್ನಡ ಸಾಹಿತ್ಯ ಪರಿಷತ್ತು, ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕಾಗಿ ಹಲವಾರು ವರ್ಷದಿಂದ ದುಡಿದಿದ್ದರು.