ಚಿಕ್ಕಮಗಳೂರು: ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಿ ಕೆ ಮುರುಳೀಧರ್ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ತವ್ಯ ಮುಗಿಸಿ ಬೆಳಗ್ಗೆ ಮನೆಯಲ್ಲಿ ಇದ್ದ ವೇಳೆ ಮುರುಳೀಧರ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಕಳಸದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಅವರು ಅಸುನೀಗಿದ್ದಾರೆ.
ಮೂಲತಃ ಬೀರೂರಿನವರಾಗಿದ್ದ ಅವರು ಕಳೆದ ನಾಲ್ಕು ವರ್ಷಗಳಿಂದ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಚಿಕ್ಕಮಗಳೂರು ಬಸವನಹಳ್ಳಿ ಠಾಣೆ, ಶೃಂಗೇರಿ, ಕುದುರೆಮುಖ ಠಾಣೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಕಳಸ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ಮಾಡುತ್ತಿದ್ದರು.
ಎಎಸ್ಐ ಮುರುಳೀಧರ್ ಅವರ ನಿವೃತ್ತಿಗೆ ಇನ್ನು ಕೇವಲ 11 ತಿಂಗಳು ಬಾಕಿ ಇತ್ತು. ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ದಕ್ಷ ಅಧಿಕಾರಿಯಾಗಿದ್ದ ಮುರುಳಿಧರ್ ಸ್ನೇಹ ಜೀವಿಯಾಗಿದ್ದರು. ಅವರ ನಿಧನಕ್ಕೆ ಕಳಸ ಠಾಣೆಯ ಠಾಣಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ. ಎಎಸ್ಐ ಜಿ ಕೆ ಮುರಳೀಧರ್ ಅವರ ಪಾರ್ಥಿವ ಶರೀರವನ್ನು ಸಕಲ ಗೌರವದೊಂದಿಗೆ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ.. ಎತ್ತಿನಗಾಡಿ ಸ್ಪರ್ಧೆಯಲ್ಲಿ ನೊಗ ಬಡಿದು ಯುವಕ ಸಾವು