ಚಿಕ್ಕಮಗಳೂರು: ಬಹು ಭಾಷಾ ನಟಿ ಸಮೀರಾ ರೆಡ್ಡಿ ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದು, ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಎಂಜಾಯ್ ಮಾಡುತ್ತಿದ್ದಾರೆ.
ಜಿಲ್ಲೆಗೆ ಆಗಮಿಸಿರುವ ನಟಿ ಸುತ್ತ ಮುತ್ತಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ರಾಜ್ಯದಲ್ಲಿಯೇ ಅತ್ಯಂತ ಎತ್ತರ ಶಿಖರ ಎಂದು ಖ್ಯಾತಿ ಪಡೆದಿರುವ ಮುಳ್ಳಯ್ಯನಗಿರಿಗೆ ಭೇಟಿ ನೀಡಿದ್ದಾರೆ. ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡುವ ಜೊತೆಗೆ ಪ್ರಕೃತಿ ಸೊಬಗನ್ನು ವರ್ಣಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇನ್ನೂ ಜಿಲ್ಲೆಯ ಸೊಬಗನ್ನು ಹಾಡಿ ಹೊಗಳಿರುವ ಸಮೀರಾ ಇದೊಂದು ಅತ್ಯಂತ ಸುಂದರ ಸ್ಥಳವಾಗಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯದ ಬಗ್ಗೆ ಮಾತೇ ಬರುತ್ತಿಲ್ಲ. ಪ್ರವಾಸಕ್ಕೆ ಇದೊಂದು ಅತ್ಯಂತ ಸುಂದರ ತಾಣ ಎಂದು ತಮ್ಮ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.