ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ನಾಳೆ-ನಾಡಿದ್ದು ಎನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ ಎಂದು ಜನ ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಬ್ಯಾಂಕ್‍ವೊಂದು ಸೀಲ್‍ಡೌನ್ ಆಗಿರುವಂತಹ ಘಟನೆ ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ.
ಕಳಸ ಪಟ್ಟಣದ ಕರ್ನಾಟಕ ಬ್ಯಾಂಕ್ ಎರಡು ದಿನಗಳ ಕಾಲ ಕೊರೊನಾ ಆತಂಕದಿಂದ ಸೀಲ್‍ಡೌನ್ ಆಗಿದೆ. ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಐವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ಬ್ಯಾಂಕ್ ನ್ನು ಸೀಲ್‍ಡೌನ್ ಮಾಡಲಾಗಿತ್ತು. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಮೂರು ದಿನಗಳ ಕಾಲ ಜನರಿಗೆ ಬ್ಯಾಂಕ್ ಇಲ್ಲದೆ ತೀವ್ರ ಸಮಸ್ಯೆ ಎದುರಾಗಿದೆ.
ಓದಿ: ಕೋವಿಡ್ ಸೋಂಕಿತರಲ್ಲಿ ಕಂಡು ಬರ್ತಿದೆ ಅಪರೂಪದ 'ಕಪ್ಪು ಚರ್ಮ ರೋಗ': ಎಚ್ಚರಿಕೆ ವಹಿಸಿದ್ರೆ ಉತ್ತಮ
ಕಳಸ ಪಟ್ಟಣದ ಸುತ್ತಮುತ್ತ ಅಡಿಕೆ, ಕಾಫಿ ತೋಟವೇ ಹೆಚ್ಚಿದ್ದು, ಈ ಭಾಗದಲ್ಲಿ ಕೂಲಿ ಕಾರ್ಮಿಕರ ಸಂಖ್ಯೆಯೂ ಹೆಚ್ಚಿದೆ. ಗ್ರಾಮೀಣ ಭಾಗವಾದ್ದರಿಂದ ಬಹುತೇಕ ಕೂಲಿ ಕಾರ್ಮಿಕರು ಕರ್ನಾಟಕ ಬ್ಯಾಂಕ್‍ನಲ್ಲಿ ಅಕೌಂಟ್ ಮಾಡಿಸಿದ್ದು, ಕಳೆದ ಮೂರು ದಿನಗಳಿಂದ ಹಣ ಬಿಡಿಸಲಾಗದೆ ಕಷ್ಟಪಡುತ್ತಿದ್ದಾರೆ. ಇನ್ನು ಕೆಲವರು ಕೂಲಿ ಕಾರ್ಮಿಕರು ಮಾಡಿದ ಕೆಲಸಕ್ಕೆ ಕೂಲಿ ನೀಡಲು ಹಣ ಬಿಡಿಸಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ.