ಚಿಕ್ಕಮಗಳೂರು : ಜಿಲ್ಲೆಯಲ್ಲಿ ಈ ದಿನ 69 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7348ಕ್ಕೆ ಏರಿದೆ.
ಚಿಕ್ಕಮಗಳೂರು 28, ಕಡೂರು 3, ತರೀಕೆರೆ 24, ಕೊಪ್ಪ 11, ಎನ್ ಆರ್ ಪುರ 3 ಸೋಂಕಿತ ಪ್ರಕರಣ ಪತ್ತೆಯಾಗಿವೆ. ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 110ಕ್ಕೆ ಏರಿದೆ.
ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 86 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 5,939 ಸೋಂಕಿತರು ಗುಣಮುಖರಾಗಿ ತೆರಳಿದಂತಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರವಹಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,348ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1,299 ಸಕ್ರಿಯ ಪ್ರಕರಣಗಳಿವೆ.