ETV Bharat / state

2 ವರ್ಷಗಳ ಬಳಿಕ ಚಾರ್ಮಾಡಿ ಘಾಟಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಅವಕಾಶ

2 ವರ್ಷದಿಂದ ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗಷ್ಟೇ ಸಂಚಾರ ಮೀಸಲಾಗಿತ್ತು. ಇದೀಗ ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದ್ದಾರೆ.

DC Ramesh
ಜಿಲ್ಲಾಧಿಕಾರಿ ಕೆ.ಎನ್.ರಮೇಶ್
author img

By

Published : Mar 17, 2021, 6:11 PM IST

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕೆಎಸ್​ಆರ್​ಟಿಸಿ ಮಿನಿ ಬಸ್​ಗೆ ಮಾತ್ರ ಅನುಮತಿ ಇತ್ತು. ಇದೀಗ 2 ವರ್ಷಗಳ ಬಳಿಕ ಎಲ್ಲಾ ಬಸ್ ಸಂಚಾರ ಆರಂಭವಾಗಿದ್ದು, ಬಸ್ ಹಾಗೂ 6 ಚಕ್ರದ ಲಾರಿ, ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

2 ವರ್ಷದಿಂದ ಲಘು ವಾಹನಗಳಿಗಷ್ಟೇ ಚಾರ್ಮಾಡಿ ಘಾಟ್​​ನಲ್ಲಿ ಸಂಚಾರ ಮೀಸಲಾಗಿತ್ತು. 6 ಚಕ್ರ ಮೇಲ್ಪಟ್ಟ ವಾಹನಗಳಿಗೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.

letter
ಆದೇಶ ಪ್ರತಿ

ಎರಡು ವರ್ಷಗಳ ಹಿಂದೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಭೂ ಕುಸಿತ ಉಂಟಾಗಿತ್ತು. ಇದರಿಂದಾಗಿ ಬಸ್​ ಸಂಚಾರ ನಿಷೇಧಿಸಲಾಗಿತ್ತು. ಇದೀಗ ಚಿಕ್ಕಮಗಳೂರು-ಮಂಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವಂತಹ ಘಾಟಿ ರಸ್ತೆಯಲ್ಲಿ ಕೆಎಸ್ಆರ್​ಟಿಸಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿರುವುದು ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.