ಚಿಕ್ಕಮಗಳೂರು : ಲಕ್ಕವಳ್ಳಿ ಹಾಗೂ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಾದಾಪೀರ್ ಬಂಧಿತ ಆರೋಪಿ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಸುಮಾರು 5.35 ಲಕ್ಷ ಮೌಲ್ಯದ 105 ಚಿನ್ನಾಭರಣ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಲಕ್ಕವಳ್ಳಿ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.