ಚಿಕ್ಕಮಗಳೂರು: ಜಮೀನು ವಿವಾದ ಹಿನ್ನೆಲೆ ತೋಟದ ಬೇಲಿ ಕಿತ್ತು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಚಿಕ್ಕಮಗಳೂರು ತಾಲೂಕಿನ ಬಿಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಚೇತನ್, ಸಚಿನ್, ಗೋಪಾಲ ಸೇರಿ 6 ಜನ ಆರೋಪಿಗಳು ಜಮೀನು ಮಾಲೀಕ ಮಂಜುನಾಥ-ಕಾವ್ಯ ಎಂಬುವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕಾವ್ಯ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಗಳು ದಂಪತಿ ಮೇಲೆ ಹಲ್ಲೆ ನಡೆಸಿದ್ದು, ಜಮೀನಿನ ತಂತಿ ಬೇಲಿ, ಕಾಫಿ ಗಿಡ ನಾಶ ಮಾಡಿದ್ದಾರೆ. ಈ ಸಂಬಂಧ 6 ಜನರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.